ರೈಲ್ವೆ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದಿಂದ ಸಹಕಾರವೇ ಇಲ್ಲ: ವಿ.ಸೋಮಣ್ಣ

Date:

Advertisements

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, “ಕ್ಷುಲ್ಲಕ ರಾಜಕಾರಣದಲ್ಲಿ ಕಾಂಗ್ರೆಸ್‌ ಸರ್ಕಾರ ಮುಳುಗಿದೆ. ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳು ಸಿಗಬೇಕು ಎಂಬುದು ಕೇಂದ್ರದ ಉದ್ದೇಶ. ಆದರೆ ರಾಜ್ಯ ಸರ್ಕಾರವೇ ಸ್ಪಂದಿಸುತ್ತಿಲ್ಲ” ಎಂದರು.

“ಎಲ್ಲ ರಾಜ್ಯಗಳಂತೆ ಕರ್ನಾಟಕದಲ್ಲೂ ರೈಲ್ವೆ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಹಲವು ಬಾರಿ ಮನವಿ ಮಾಡಿದರೂ ಸಿದ್ದರಾಮಯ್ಯ ಸರ್ಕಾರದಿಂದ ಸ್ಪಂದನೆ ಇಲ್ಲವಾಗಿದೆ. ಇಚ್ಛಾಶಕ್ತಿ ಕೊರತೆ ಕಂಡುಬರುತ್ತಿದೆ. ಚಾಮರಾಜನಗರದಿಂದ ತಮಿಳುನಾಡಿನ ಮೆಟ್ಟುಪಾಳ್ಯಂವರೆಗೆ ರೈಲು ಮಾರ್ಗ ವಿಸ್ತರಿಸುವುದು, ಮೈಸೂರು-ಕುಶಾಲನಗರ ಮಾರ್ಗ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳಿಗೆ ಅಗತ್ಯವಾದ ಭೂಮಿ ಕೊಡುತ್ತಿಲ್ಲ” ಎಂದು ಗಮನ ಸೆಳೆದರು.

“ನವದೆಹಲಿಗೆ ಬಂದಿದ್ದಾಗ ಮುಖ್ಯಮಂತ್ರಿಗೆ, ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಸ್ತುವಾರಿ ಕಾರ್ಯದರ್ಶಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ತಿಳಿಸಿದ್ದೆ. ಮನವಿಪತ್ರ ಸಲ್ಲಿಸುವಂತೆ ತಿಳಿಸಿದ್ದರೂ ಸಲ್ಲಿಸಿಲ್ಲ” ಎಂದರು.

“ರಾಜ್ಯ ಸರ್ಕಾರವು ಜನರ ದಿಕ್ಕು ತಪ್ಪಿಸುವ ಕೆಲಸಗಳನ್ನು ಮಾಡುವ ಬದಲಿಗೆ, ಅಭಿವೃದ್ಧಿಗೆ ಆದ್ಯತೆ ಕೊಡಬೇಕು. ಈ ವಿಷಯದಲ್ಲಿ ರಾಜ್ಯದೊಂದಿಗೆ ಚರ್ಚೆಗೆ ನಾನು ಸಿದ್ದವಿದ್ದೇನೆ. ಲೆವೆಲ್ ಕ್ರಾಸಿಂಗ್ ಇಲ್ಲದಂತೆ ಮಾಡುವುದಕ್ಕಾಗಿ ಮೇಲ್ವೇತುವೆ ಹಾಗೂ ಕೆಳಸೇತುವೆಗಳಿಗೆ ಶೇ 100ರಷ್ಟು ಹಣವನ್ನು ಕೇಂದ್ರದಿಂದಲೇ ಕೊಡುತ್ತಿದ್ದೇವೆ. ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡದಿರುವುದನ್ನು ಮನಗಂಡು ಪ್ರಧಾನಿಯವರೇ ಕೊಡುತ್ತಿದ್ದಾರೆ” ಎಂದು ಹೇಳಿದರು.

“ಬೆಂಗಳೂರು ನಗರದ 100 ಕಿ.ಮೀ. ವ್ಯಾಪ್ತಿಯಲ್ಲಿ 175 ಲೆವೆಲ್ ಕ್ರಾಸಿಂಗ್‌ಗಳಿವೆ. ಇವುಗಳು ಇಲ್ಲದಂತೆ ಮೂರು ವರ್ಷಗಳಲ್ಲಿ ಮಾಡಲಾಗುವುದು. ಒಟ್ಟು ₹ 48ಸಾವಿರ ಮೊತ್ತದ ಹಳೆಯ ಯೋಜನೆಯನ್ನು ಕೈಗೆತ್ತಿಕೊಂಡು ಅನುಷ್ಠಾನಕ್ಕೆ ಕ್ರಮ ಕೈಗೊಂಡಿದ್ದೇವೆ” ಎಂದರು.

“ನರೇಂದ್ರಮೋದಿ ಪ್ರಧಾನಿಯಾಗಿ 12 ವರ್ಷ ತುಂಬುತ್ತಿರುವ ವೇಳೆಯಲ್ಲಿ ದೇಶದ ಜನರಿಗೆ ನೀಡಿರುವ ಜಿಎಸ್‌ಟಿ ಗಿಫ್ಟ್ ನೀಡಿದ್ದಾರೆ. ಜನರ ಅನುಕೂಲಕ್ಕಾಗಿ ಜಿಎಸ್‌ಟಿಗೆ ಗಣನೀಯವಾಗಿ ಸುಧಾರಣೆ ತರಲಾಗಿದೆ. ಇದು ಯಾವುದೇ ಚುನಾವಣೆಯನ್ನು ಮುಂದಿಟ್ಟುಕೊಂಡು ಮಾಡಿರುವ ಕ್ರಮ ಅಲ್ಲ. ಚುನಾವಣೆಗಳು ಬರುತ್ತವೆ, ಹೋಗುತ್ತವೆ. ಜನರ ಅನುಕೂಲಕ್ಕಾಗಿ ಹೊಸ ನೀತಿ ಮಾಡಲಾಗುತ್ತಿದೆ” ಎಂದು ಹೇಳಿದರು.

ಚಾಮುಂಡಿ ಬೆಟ್ಟದ ಶಿಷ್ಟಾಚಾರ, ಸಂಪ್ರದಾಯ ಪಾಲಿಸಿ

“ನಂಬಿಕೆಗೆ, ಭಕ್ತಿಗೆ, ಇತಿಹಾಸಕ್ಕೆ ಮತ್ತೊಂದು ಹೆಸರು ಚಾಮುಂಡಿ ಬೆಟ್ಟ. ದಸರಾ ಉದ್ಘಾಟಕರಿಗೆ ತಾಯಿ ಚಾಮುಂಡಿಯ ಇತಿಹಾಸ ಉತ್ಸವ, ಆರಾಧನೆ, ಸಂಪ್ರದಾಯವನ್ನು ಮೊದಲು ತಿಳಿಸಿ. ಸಂಪ್ರದಾಯ ಅರಿತು ಅವರು ತಮ್ಮ ಕಾರ್ಯ ಮಾಡಲಿ. ದಸರಾ ಉದ್ಘಾಟಕರು ಈ ಸ್ಥಾನಕ್ಕೆ ಅರ್ಹರೋ ಅಥವಾ ಇಲ್ಲವೋ ಎಂಬ ಚರ್ಚೆ ಮಾಡಲ್ಲ. ನಮ್ಮ ಸಂಪ್ರದಾಯಕ್ಕೆ ಧಕ್ಕೆ ಆಗದಂತೆ ಉದ್ಘಾಟಕರು ನಡೆದುಕೊಳ್ಳಲಿ” ಎಂದರು.

ತುಮಕೂರಿನಿಂದ ಸ್ಪರ್ಧಿಸೋದಿಲ್ಲ

“ತುಮಕೂರಿನಲ್ಲಿ ಎಲ್ಲಾ ಕೆಲಸಗಳನ್ನು ಮಾಡಿದ್ದೇನೆ. ಹೀಗಾಗಿ ಅಲ್ಲಿ ಮುಂದೆ ಚುನಾವಣೆಗೆ ಸ್ಪರ್ಧಿಸೋದಿಲ್ಲ ಅಂತಾ ಹೇಳಿದ್ದೀನಿ. ಇನ್ನು ಮುಂದೆ ಬೇರೆ ಕಡೆಗೆ ಹೋಗೋಣ ಅಂತಾ. ಎಲ್ಲಿ ಅಂತಾ ನಿರ್ಧಾರ ಆಗಿಲ್ಲ. ದೇವರ ಆಶೀರ್ವಾದ, ದೇವರ ಇಚ್ಚೆ ಏನಿದೆಯೋ ಗೊತ್ತಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X