ಕರ್ತವ್ಯಲೋಪ ಹಾಗೂ ಹಣಕಾಸು ದುರುಪಯೋಗ ಮಾಡಿದ್ದಕ್ಕಾಗಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಳಗಿ ಗ್ರಾಮ ಪಂಚಾಯಿತಿಯ ಹಿಂದಿನ ಪಿಡಿಒ ಆಗಿದ್ದು, ಪ್ರಸ್ತುತದಲ್ಲಿ ಉಗ್ನಿಕೇರಿ ಪಿಡಿಒ ಅಬ್ದುಲ್ ರಜಾಕ್ ಎಚ್ ಮನಿಯಾರ ಅವರನ್ನು ಸೆಪ್ಟೆಂಬರ್ 2ರಂದು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ.
2024-25 ಹಾಗೂ 2025-26ನೇ ಸಾಲುಗಳಲ್ಲಿ ಗ್ರಾಮ ಪಂಚಾಯಿತಿಗಳಿಂದ ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಪಾವತಿಸಬೇಕಾಗಿರುವ ಕುಡಿಯುವ ನೀರು ಸರಬರಾಜು ಮತ್ತು ಬೀದಿದೀಪ ಸ್ಥಾವರಗಳ ಬಾಕಿ ಮೊತ್ತವನ್ನು ಎಸ್ಕ್ರೋ ಖಾತೆಯಿಂದ ಪಾವತಿಸುವ ಕುರಿತು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾದ ಸುತ್ತೋಲೆಗಳಲ್ಲಿ ತಿಳಿಸಲಾಗಿದ್ದರೂ ಕೂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ ರಜಾಕ್ ಎಚ್ ಮನಿಯಾರ ಸರ್ಕಾರದ ಅನುದಾನವನ್ನು ದುರುಪಯೋಗ ಮಾಡಿಕೊಂಡು ಕರ್ತವ್ಯಲೋಪ ಎಸಗಿರುತ್ತಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಕೋಲಾರ | ವೆರ್ಗಾ ಕಂಪೆನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ
ಕರ್ನಾಟಕ ನಾಗರಿಕ ಸೇವಾ ನಿಯಮಗಳು(ವರ್ಗಿಕರಣ ನಿಯಂತ್ರಣ ಮತ್ತು ಅಪೀಲು) 1957ರ ನಿಯಮ 10(1)ದ ಪ್ರಕಾರ ಗ್ರಾಮಪಂಚಾಯಿತಿ ಪಿಡಿಒ ಅಬ್ದುಲ್‍ರಜಾಕ್ ಎಚ್ ಮನಿಯಾರ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೋಳಿಸಿ ಆದೇಶ ಹೊರಡಿಸಿದ್ದಾರೆಂದು ಪ್ರಕಟಣೆ ತಿಳಿಸಿದೆ.