ರಾಯಚೂರು | ತುಂಗಭದ್ರಾ ಕ್ರಸ್ಟರ್ ಗೇಟ್ ಅಳವಡಿಕೆಗೆ ಪ್ರತಿಭಟನೆ : ಚಾಮರಸ ಮಾಲಿ ಪಾಟೀಲ

Date:

Advertisements

ತುಂಗಭದ್ರಾ ಜಲಾಶಯದ ಕ್ರಸ್ಟಗೇಟ್ ಕಾಮಗಾರಿಯನ್ನು ತ್ವರಿತಗೊಳಿಸುವುದು ಸೇರಿದಂತೆ ರೈತರ ಜ್ವಲಂತ ಸಮಸ್ಯೆಗಳ ವಿರುದ್ಧ ಸೆ. 8 ರಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ರೈತ ಸಂಘಟನೆಯ ನೇತೃತ್ವದಲ್ಲಿ ಪಕ್ಷಾತೀತ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಹೇಳಿದರು.

ಅವರು ಗುರುವಾರ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿ, ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಿತ್ತು ಹೋಗಿ ಅಪಾರ‌ ಪ್ರಮಾಣದ ನೀರು ನೆರೆಯ ರಾಜ್ಯಕ್ಕೆ ಹರಿದು ಹೋಗಿತ್ತು. ಈಗ ಶಿಥಿಲವಾಗಿರುವ ಗೇಟ್ ಅಳವಡಿಕೆ ಟೆಂಡರ್ ಕರೆಯಲಾಗಿದ್ದು ನಿಧಾನಗತಿಯಿಂದ ಕೆಲಸ ನಡೆಯುತ್ತಿದೆ. ಸಕಾಲಕ್ಕೆ ಗುತ್ತಿಗೆದಾರರಿಗೆ ಹಣ ಪಾವತಿಸಿದರೆ ವೇಗವಾಗಿ ಕಾಮಗಾರಿ ಮುಗಿದು ರೈತರಿಗೆ ಅನುಕೂಲವಾಗಲಿದೆ. ನೀರಾವರಿ ಇಲಾಖೆಯ ಅಧಿಕಾರಿಗಳು ಬೇಸಿಗೆ ಬೆಳೆಗೆ ನೀರಿಲ್ಲ ಎಂದು ಹೇಳುತ್ತದ್ದಾರೆ. ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದ ರೈತರು ಸಂಕಷ್ಟಕ್ಕೆ ಈಡಾಗುವಂತಾಗಿದೆ ಎಂದು ಆರೋಪಿಸಿದರು.

ಜಲಾಶಯದಲ್ಲಿ ತುಂಬಿರುವ ಹೂಳು ತೆಗೆಯಲು ಮುಂದಾಗುತ್ತಿಲ್ಲ. ನವಲಿ ಜಲಾಶಯವೂ ನಿರ್ಮಾಣ ಮಾಡುತ್ತಿಲ್ಲ. ನೆರೆಯ ಆಂಧ್ರಪ್ರದೇಶ, ತೆಲಂಗಾಣದ ಸರ್ಕಾರದೊಂದಿಗೆ ಚರ್ಚಿಸಲು ವರ್ಷಗಳು ಉರುಳಿ ಹೋಗುತ್ತಿವೆ. ಯಾವುದೇ ನಿರ್ಧಾರಕ್ಕೆ ಸರ್ಕಾರ ಬರುತ್ತಿಲ್ಲ. ಸಿಬ್ಬಂದಿ ಕೊರತೆಯಿಂದ ನೀರು ನಿರ್ವಹಣೆ ಸಾಧ್ಯವಾಗದೇ ಹೋಗಿದೆ. ಕಳೆದ ಜುಲೈ ತಿಂಗಳಲ್ಲಿ ಕಾಲುವೆಗೆ ನೀರು ಹರಿಸಿದರೆ ಸೆಪ್ಟೆಂಬರ್‌ನಲ್ಲಿ ಸಿರವಾರಕ್ಕೆ ನೀರು ಬಂದಿದೆ. ಅನಧಿಕೃತ ನೀರಾವರಿ ತಡೆಯಲು ಕಾನೂನು ರೂಪಿಸಿದ್ದರೂ ಜಾರಿಗೊಳಿಸುತ್ತಿಲ್ಲ. ಅಚ್ಚುಕಟ್ಟು ವ್ಯಾಪ್ತಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ನಡೆಯಲಿರುವ ಬೃಹತ್ ಪ್ರತಿಭಟನೆಗೆ ನಾಲ್ಕು ಜಿಲ್ಲೆಗಳು ವಿವಿಧ ರಾಜಕೀಯ ಪಕ್ಷಗಳ ನಾಯಕರು, ಸಂಘ ಸಂಸ್ಥೆಗಳ, ವರ್ತಕರು, ವ್ಯಾಪಾರಸ್ಥರು ಭಾಗವಹಿಸುವಂತೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಮಶಾನ ಭೂಮಿಯಿಲ್ಲದೇ ಅಂತ್ಯಸಂಸ್ಕಾರಕ್ಕೆ ಸಂಕಟ

ಮಾಜಿ ಶಾಸಕ ಗಂಗಾಧರ ನಾಯಕ, ಶರಣಪ್ಪಗೌಡ ಜಾಡಲದಿನ್ನಿ, ಬೂದೆಯ್ಯ ಸ್ವಾಮಿ, ವೈ.ಬಸನಗೌಡ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

Download Eedina App Android / iOS

X