ವಿಜಯಪುರ | ಪರಿಹಾರ ನೀಡದೇ ಭೂ ಕಬಳಿಕೆ ಮಾಡಿದ ಅಧಿಕಾರಿಗಳ ವಜಾಕ್ಕೆ ರೈತರ ಆಗ್ರಹ

Date:

Advertisements

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಏತನೀರಾವರಿ ಯೋಜನೆಯಡಿ ವಡವಡಗಿ ಕೆರೆ ನೀರು ತುಂಬುವ ಕಾಮಗಾರಿಗೆ ಸಂಬಂಧಿಸಿದಂತೆ ರೈತ ಮಂಜುನಾಥ ತಳವಾರ ಅವರ ಸ.ನಂ.163/3 ರ ಭೂಮಿ ಪಡೆದ ಅಧಿಕಾರಿಗಳು, ಇಲ್ಲಿವರೆಗೆ ಪರಿಹಾರವನ್ನೂ ನೀಡದೇ ನಿರ್ಲಕ್ಷ್ಯ ತೋರಿರುತ್ತಾರೆ. ಅಂತಹವರ ವಿರುದ್ಧ ಕ್ರಮ ಕೈಗೊಂಡು ವಜಾ ಮಾಡಬೇಕು ಹಾಗೂ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತರು ಆಗ್ರಹಿಸಿದರು.

ಈ ಕುರಿತು ಕೆಬಿಜೆಎನ್ಎಲ್‌ನ ಮುಖ್ಯ ಅಭಿಯಂತರ ಡಾ. ಬಸವರಾಜ ಹಾಗೂ ಐ ಎಲ್ ಕಳಸದ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮನವಿ ಸಲ್ಲಿಸಿ ಮಾತನಾಡಿ, “ತಮ್ಮ ಇಲಾಖೆಯ ವತಿಯಿಂದ ಮಾಡಿರುವ ಮುಳವಾಡ ಏತನೀರಾವರಿ ಯೋಜನೆಯಡಿ ವಡವಡಗಿ ಕೆರೆ ನೀರು ತುಂಬುವ ಕಾಮಗಾರಿಗೆ ಸಂಬಂಧಿಸಿದಂತೆ ಕಾಮಗಾರಿಯನ್ನೂ ಸಂಪೂರ್ಣ ಮಾಡದೇ ಗುತ್ತಿಗೆದಾರರು ಬಿಲ್ ಸಂದಾಯ ಮಾಡಿಕೊಂಡಿರುತ್ತಾರೆ. ಇದಕ್ಕೆ ಇಲಾಖೆಯ ಅಧಿಕಾರಿಗಳು ಶಾಮಿಲಾಗಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ನಷ್ಟಗೊಂಡ ರೈತರಿಗೆ ಇಲ್ಲಿಯವರೆಗೆ ಯಾವುದೇ ಭೂ ಪರಿಹಾರ ನೀಡಿರುವುದಿಲ್ಲ, 1972 ರಿಂದ ಜಮೀನಿನಲ್ಲಿ ವಿದ್ಯುತ್ ಸಂಪರ್ಕವಿತ್ತು. 638 ದಾಳಿಂಬೆ ಗಿಡ, ಒಂದು ಬಾವಿ, ಒಂದು ಬೊರವೆಲ್‌ ಒಳಗೊಂಡ ತೋಟದಲ್ಲಿ ಸುಮಾರು 50 ವರ್ಷಗಳಿಂದ ಕೃಷಿ ಮಾಡಲಾಗುತ್ತಿತ್ತು. ಇದನ್ನು ಗಣನೆಗೆ ತೆಗೆದುಕೊಳ್ಳದೇ ಪ್ರಭಾವಿಗಳ ಕೈವಾಡದಿಂದ ರೈತರಿಗೆ ನಷ್ಟ ಉಂಟಾಗುವಂತೆ ಅಧಿಕಾರಿಗಳು ಮಾಡಿದ್ದಾರೆ. ಕೂಡಲೇ ಇದರಲ್ಲಿ ಭಾಗಿಯಾಗಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ

“ಎಲ್ಲವೂ ಸರಿ ಇದೆ ಎಂದು ಬಿಂಬಿಸಿ ಕಾಮಗಾರಿಯ ಬಿಲ್ ಮಾಡಿರುವ ಇಲಾಖೆ ಅಧಿಕಾರಿಗಳನ್ನ ವಜಾ ಗೊಳಿಸಬೇಕು ಇಲ್ಲವಾದಲ್ಲಿ ಒಂದು ವಾರದ ನಂತರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಆಲಮಟ್ಟಿಯ ಕೆ.ಬಿ.ಜೆ.ಎನ್.ಎಲ್ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಹಾಕಿ ಉಗ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಈ ವೇಳೆ ಜಿಲ್ಲಾ ಪ್ರಧಾನಕಾರ್ಯದರ್ಶಿ ರಾಮನಗೌಡ ಪಾಟೀಲ, ನಿಡಗುಂದಿ ತಾಲೂಕು ಅಧ್ಯಕ್ಷ ಡಾ. ಕೆ ಎಂ ಗುಡ್ನಾಳ, ಮುಖಂಡರಾದ ತಿಪ್ಪಣ್ಣ ನಾಟಿಕಾರ, ಮೋತಿಲಾಲ ಉಣ್ಣಿಬಾಯಿ, ದಾನಪ್ಪ ಗದ್ಯಾಳ, ಮಂಜುನಾಥ ನಾಟಿಕಾರ, ಬುಡ್ಡೆಸಾಬ ಡವಳಗಿ, ಮೋದಿನಸಾಬ ಭಾಗವಾನ, ಕಲ್ಲಪ್ಪ ಅಫಜಲಪುರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X