ಅಕ್ಟೋಬರ್ 19ರಂದು ನಡೆಯಲಿರುವ ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪ್ಯಾನೆಲ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಈ ಬಾರಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಲಿಂಗಾಯತ ಸಮುದಾಯದವರಿಗೆ ಮೀಸಲು ಮಾಡುವ ನಿರ್ಧಾರ ಕೈಗೊಂಡಿದ್ದೇವೆ ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸ್ಪಷ್ಟಪಡಿಸಿದರು.
ಗುರುವಾರ ಹುಕ್ಕೇರಿ ಪಟ್ಟಣದ ರವದಿ ಫಾರ್ಮ್ ಹೌಸ್ನಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದ ಪ್ರಾದೇಶಿಕ ಸಭೆಯಲ್ಲಿ ಮಾತನಾಡಿದ ಶಾಸಕ ಅವರು ನಮ್ಮ ಗುಂಪು ಸಂಪೂರ್ಣ ಬಹುಮತ ಪಡೆದು ಬ್ಯಾಂಕಿನ ಆಡಳಿತ ಹಿಡಿಯಲಿದೆ. ರೈತರ ಅಭಿವೃದ್ಧಿಯೇ ನಮ್ಮ ಪ್ರಮುಖ ಗುರಿ” ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಡಾ. ಪ್ರಭಾಕರ ಕೋರೆ, ರಮೇಶ್ ಜಾರಕಿಹೊಳಿ, ಅಣ್ಣಾಸಾಹೇಬ ಜೊಲ್ಲೆ ಮುಂತಾದ ಹಿರಿಯ ನಾಯಕರ ಮುಂದಾಳತ್ವದಲ್ಲಿ ಈಗಾಗಲೇ ಪ್ರಚಾರ ಆರಂಭಗೊಂಡಿದ್ದು, ಎಲ್ಲ ತಾಲ್ಲೂಕುಗಳಲ್ಲಿ ರೈತರ ಬೆಂಬಲ ನಮ್ಮೊಂದಿಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.