ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಬೈಲೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸಹನಾ (24) ಎಂಬ ಯುವತಿಯು ಸೆಪ್ಟಂಬರ್ 4 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಕಾಲೇಜಿಗೆ ಫೀಸು ಕಟ್ಟಲೆಂದು ಮನೆಯಿಂದ ಹೋದವರು ವಾಪಾಸು ಬಾರದೆ ನಾಪ್ತತೆಯಾದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವತಿಯು 5 ಅಡಿ 9 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.