ಗದಗ | ಸೆ.7ರಂದು ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ ಪ್ರದಾನ, ‘ನನ್ನ ಅನುಭವ-ನನ್ನ ಮಾತು’ ಶೈಕ್ಷಣಿಕ ವಿಚಾರ ಗೋಷ್ಠಿ

Date:

Advertisements

“ಸೆಪ್ಟಂಬರ್ 7 ರಂದು ಮುಂಡರಗಿಯ ಕಲಾ ಶಿಕ್ಷಣ-ಸಂಸ್ಕೃತಿ ಪ್ರತಿಷ್ಠಾನದಿಂದ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ ಪ್ರದಾನ ಹಾಗೂ ‘ನನ್ನ ಅನುಭವ-ನನ್ನ ಮಾತು’ ಶೈಕ್ಷಣಿಕ ವಿಚಾರ ಗೋಷ್ಠಿ ಜರುಗಲಿದೆ” ಎಂದು ಪ್ರತಿಷ್ಠಾನದ ಅಧ್ಯಕ್ಷರು ನಿಂಗು ಸೋಲಗಿ ಅವರು ತಿಳಿಸಿದ್ದಾರೆ.

ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡುವುದು ನಂತರ ಅವರಲ್ಲೊಬ್ಬರು ಅನಿಸಿಕೆ ವ್ಯಕ್ತಪಡಿಸುವುದು ಬಹುತೇಕ ವಾಡಿಕೆ. ಆದರಿಲ್ಲಿ ಪ್ರಶಸ್ತಿಗೆ ಭಾಜನರಾದವರು ತಮ್ಮ ಕ್ಷೇತ್ರದಲ್ಲಿ ಪ್ರಯೋಗ ಮಾಡಿದ ಶೈಕ್ಷಣಿಕ ಸಂಗತಿಗಳನ್ನು ಆಧಾರವಾಗಿಟ್ಟುಕೊಂಡು ನಿಗದಿತ ಸಮಯದಲ್ಲಿ ವಿಷಯ ಮಂಡಿಸುವ ಮೂಲಕ ಸಂವಾದ ನಡೆಯಲಿದೆ. 

ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದು , ಶಾಲಾ ಶಿಕ್ಷಣ ಇಲಾಖೆ ವಿಶ್ರಾಂತ ಉಪನಿರ್ದೇಶಕರು ಎ. ಎನ್. ನಾಗರಹಳ್ಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ: ಶಿಕ್ಷಕರ ದಿನಾಚರಣೆ; ಮೂವರು ಯೋಗ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ

ಮುಖ್ಯ ಅತಿಥಿಗಳಾಗಿ ಬಿಜಿವಿಎಸ್ ರಾಜ್ಯ ಉಪಾಧ್ಯಕ್ಷರಾದ ಎಫ್. ಸಿ. ಚೇಗರಡ್ಡಿ, ಶಾಲಾ ಶಿಕ್ಷಣ ಇಲಾಖೆ ವಿಶ್ರಾಂತ ಉಪನಿರ್ದೇಶಕರಾದ ಎಸ್. ಡಿ. ಗಾಂಜಿ, ಎಐಎಮ್‌ಎ ಮಾಜಿ ಅಧ್ಯಕ್ಷರಾದ ಡಾ. ಅನ್ನದಾನಿ ಮೇಟಿ, ಮುಂಡರಗಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತ  ಅಧ್ಯಕ್ಷರಾದ ಎಂ. ಜಿ. ಗಚ್ಚಣ್ಣವರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಂಗಾಧರ ಅಣ್ಣಿಗೇರಿ ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X