ಬೀದರ್‌ | ಕರ್ತವ್ಯ ಲೋಪ, ನಿರ್ಲಕ್ಷ್ಯತನ : ವೈದ್ಯೆ ಅಮಾನತು

Date:

Advertisements

ಕರ್ತವ್ಯಲೋಪ‌, ನಿರ್ಲಕ್ಷ್ಯತನ ಆರೋಪದಡಿ ಬೀದರ್ ಜಿಲ್ಲೆಯ ಬಸವಕಲ್ಯಾಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಇರ್ಷಾನಾ ಅವರನ್ನು ಅಮಾನತುಗೊಳಿಸಲಾಗಿದೆ.

ʼ2025ರ ಆಗಸ್ಟ್‌ 8ರಂದು ಬಸವಕಲ್ಯಾಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಗು ಜನನದ ನಂತರ ತಾಯಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದರು. ಬಾಣಂತಿಗೆ ಸೂಕ್ತ ಚಿಕಿತ್ಸೆ ನೀಡದೇ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಕಾರಣ ಅಮಾನತುಗೊಳಿಸಲಾಗಿದೆʼ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಶಿಸ್ತು ಪ್ರಾಧಿಕಾರ ಮತ್ತು ಆಯುಕ್ತ ಶಿವಕುಮಾರ ಕೆ.ಬಿ.ಆದೇಶದಲ್ಲಿ ತಿಳಿಸಿದ್ದಾರೆ.

ಅಮಾನತುಗೊಂಡಿರುವ ಡಾ.ಇರ್ಷಾನಾ ಅವರ ಲೀನ್‌ ಅನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಹುದ್ದೆಗೆ ಸ್ಥಳಾಂತರಿಸಲಾಗಿದೆ. ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೇ ಕೇಂದ್ರ ಸ್ಥಾನ ಬಿಡುವಂತಿಲ್ಲʼ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಕಲಬುರಗಿ | ಕುಡಿತ ಮತ್ತಿನಲ್ಲಿ ಅಸಭ್ಯ ವರ್ತನೆ : ಶಿಕ್ಷಕ ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

Download Eedina App Android / iOS

X