ಪೋಷಕರು ನೋಡಿದ ಹುಡುಗನನ್ನು ಮದುವೆಯಾಗಲು 20 ವರ್ಷದ ಯುವತಿ ನಿರಾಕರಿಸಿದ ಕಾರಣ ಆಕೆಯ ತಂದೆಯೇ ಆಕೆಯನ್ನು ಕೊಂದಿರುವ ಘಟನೆ ಉತ್ತರ ಪ್ರದೇಶದ ಮುಝಾಫರ್‌ನಗರದಲ್ಲಿ ನಡೆದಿದೆ.
ತನ್ನ ಮಗಳನ್ನು ಕೊಂದ ಬಳಿಕ ತಂದೆ ಗಯೂರ್ ಶನಿವಾರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು ತಾನು ಮಾಡಿರುವ ಕೊಲೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.
ಇದನ್ನು ಓದಿದ್ದೀರಾ? ಮರ್ಯಾದೆಗೇಡು ಹತ್ಯೆ | ಸ್ನೇಹಿತನೊಂದಿಗೆ ದೆಹಲಿಗೆ ತೆರಳಿದ್ದ ಮಗಳನ್ನ ಕೊಂದ ದುರುಳ ತಂದೆ
40 ವರ್ಷದ ಗಯೂರ್ ವಿರುದ್ದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಶನಿವಾರ ರಾತ್ರಿ ಬಂಧಿಸಿದ್ದಾರೆ. ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸರ್ಕಲ್ ಆಫೀಸರ್ (ನಗರ) ಸಿದ್ಧಾರ್ಥ್ ಕೆ ಮಿಶ್ರಾ ಭಾನುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇನ್ನು ಯುವತಿ ಬೇರೆ ಯುವಕನನ್ನು ಮದುವೆಯಾಗಬೇಕೆಂದು ಬಯಸಿದ್ದಳು. ಆದರೆ ಆಕೆಯ ಪೋಷಕರು ಆಕೆಯ ಇಚ್ಛೆಗೆ ವಿರುದ್ಧವಾಗಿ ಮದುವೆ ಗೊತ್ತು ಮಾಡಿದ್ದರು. ತನ್ನ ಇಚ್ಛೆಗೆ ವಿರುದ್ಧವಾಗಿ ಬೇರೊಬ್ಬರೊಂದಿಗೆ ವಿವಾಹವಾಗಲು ಯುವತಿ ಒಪ್ಪಲಿಲ್ಲ ಎಂದು ಸ್ಥಳೀಯರು ತಿಳಿಸಿರುವುದಾಗಿ ವರದಿಯಾಗಿದೆ.
