ಮಂಡ್ಯ | ಸೆ.13ಕ್ಕೆ ‘ಸ್ವರಾಜ್ ಉತ್ಸವ’ : ಶಾಸಕ ದರ್ಶನ್ ಪುಟ್ಟಣ್ಣಯ್ಯ

Date:

Advertisements

ಮಂಡ್ಯ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ ‘ಗಾಂಧೀಜಿಯವರ ಕನಸಿನಂತೆ ಸ್ವಾವಲಂಬನೆ, ಸ್ವಾಭಿಮಾನ, ಶಾಶ್ವತ ಅಭಿವೃದ್ಧಿ ತತ್ವಗಳ ಆಧಾರದ ಮೇಲೆ ಜನ ಸಾಮಾನ್ಯರಿಗೆ ಅರಿವು ನೀಡುವ ಉದ್ದೇಶದಿಂದ ಇದೇ ಸೆ.13 ರಂದು ‘ಸ್ವರಾಜ್ ಉತ್ಸವ‘ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಪುಟ್ಟಣ್ಣಯ್ಯ ಫೌಂಡೇಶನ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ 30 ಕ್ಕೂ ಹೆಚ್ಚು ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. 10 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸ್ವರಾಜ್ ಉತ್ಸವವು ಪಾಂಡವಪುರದ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವುದಕ್ಕಾಗಿ ರೂಪಿಸಿದ್ದ ಆಪ್ ಮೂಲಕ ಹಲವು ಮಾಹಿತಿಗಳು ಲಭ್ಯವಾಗಿವೆ. ಮುಖ್ಯವಾಗಿ ಪಾಂಡವಪುರ ತಾಲ್ಲೂಕಿನ ಒಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶೇ.40% ರಷ್ಟು ಸಕ್ಕರೆ ಖಾಯಿಲೆ ರೋಗಿಗಳು ಇರುವ ಮಾಹಿತಿ ಲಭ್ಯವಾಗಿದೆ. ಆದುದರಿಂದ, ನಾವು ಮುಂದೆ ಯಾವ ರೀತಿಯ ಯೋಜನೆ ಕೈಗೊಳ್ಳಬೇಕು ಎಂಬುದು ಸ್ಪಷ್ಟವಾಗಿ ತಿಳಿದು ಬಂದಿದೆ ಎಂದರು.

ಈ ಹಿಂದೆ ಹಮ್ಮಿಕೊಂಡಿದ್ದ ಸೆಲ್ಕೋ ಮೇಳದಲ್ಲಿ ಸುಮಾರು 600 ರೈತರು ಭಾಗವಹಿಸುವ ನಿರೀಕ್ಷೆ ಇತ್ತು. ಆದರೆ, 1300 ಜನ ಭಾಗವಹಿಸಿದರು. ಅದರಲ್ಲಿ ನೂರಾರು ರೈತರು ಸೌರಶಕ್ತಿ ಆಧಾರಿತ ಬಹುಪಯೋಗಿ ಯಂತ್ರಗಳನ್ನು ಪಡೆದಿದ್ದಾರೆ ಎಂದು ವಿವರಿಸಿದರು.

5240

“ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಹುಟ್ಟೂರಾದ ಕ್ಯಾತನಹಳ್ಳಿಯಲ್ಲಿ ಈಗಾಗಲೇ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಮಾದರಿ ಶಾಲೆಯನ್ನು ಸ್ಥಾಪಿಸಲಾಗುತ್ತಿದೆ. ಇದೇ ರೀತಿ ಕ್ಷೇತ್ರದಾದ್ಯಂತ 5 ಮಾದರಿ ಶಾಲೆಗಳನ್ನು ಸ್ಥಾಪಿಸುವ ಉದ್ಧೇಶ ಹೊಂದಿದ್ದೇವೆ. ನಗರ ಮಟ್ಟದ ಎಲ್ಲಾ ಮೂಲ ಸೌಕರ್ಯಗಳನ್ನು ಒಳಗೊಂಡ ಮಾದರಿ ಶಾಲೆಗಳಲ್ಲಿ ಬಡವರ ಮಕ್ಕಳು ವ್ಯಾಸಂಗ ಮಾಡುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ” ಎಂದರು.

ಕೃಷಿ, ಆರೋಗ್ಯ, ಆರ್ಥಿಕ ಸ್ವಾವಲಂಬನೆ, ಯುವಜನ ಅಭಿವೃದ್ಧಿ, ತಂತ್ರಜ್ಞಾನ, ಉದ್ಯಮಶೀಲತೆ, ಶಿಕ್ಷಣ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಸ್ವಯಂ ಸೇವಾ ಸಂಸ್ಥೆಗಳಿಂದ ಪ್ರದರ್ಶನ, ಪ್ರಾತ್ಯಕ್ಷಿಕೆ ಹಾಗೂ ನೇರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. 50ಕ್ಕೂ ಹೆಚ್ಚು ಮಳಿಗೆಗಳು ಪಾಂಡವ  ಕ್ರೀಡಾಂಗಣದಲ್ಲಿ ಸ್ಥಾಪನೆಯಾಗಲಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಮಾಹಿತಿ, ಜಾಗೃತಿ ಮೂಡಿಸಲಿವೆ.

ಈ ಸುದ್ದಿ ಓದಿದ್ದೀರಾ? ಟಿ. ನರಸೀಪುರ | ಕ್ಷುಲ್ಲಕ ಕಾರಣಕ್ಕೆ ಗಲಾಟೆ; ದಲಿತ ಯುವಕನಿಗೆ ಮನಬಂದಂತೆ ಥಳಿಸಿದ ಪೊಲೀಸರು

“ಹಳ್ಳಿಗಳಲ್ಲಿ ಬದಲಾಗುತ್ತಿರುವ ಜೀವನ ಶೈಲಿಗಳ ನಡುವೆಯೂ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವ ಮಾರ್ಗಗಳನ್ನು ಜನರಿಗೆ ತಿಳಿಸುವುದು ಈ ಉತ್ಸವದ ಮುಖ್ಯ ಗುರಿ, ಸುಸ್ಥಿರ ಕೃಷಿ, ಮಿಶ್ರ ಬೆಳೆ ಪದ್ಧತಿ, ನೈಸರ್ಗಿಕ ಕೃಷಿ, ಸ್ಥಳೀಯ ಕೈಗಾರಿಕೆಗಳ ಉತ್ತೇಜನ, ಮಹಿಳೆಯರ ಸಬಲೀಕರಣ ಹಾಗೂ ಪರಿಸರ ಸ್ನೇಹಿ ಬದುಕಿನ ಕುರಿತು ಈ ಕಾರ್ಯಕ್ರಮ ಜನರಿಗೆ ದಾರಿದೀಪವಾಗಲಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X