ಸಿಡಿಲು ಬಡಿದು ವ್ಯಕ್ತಿ ಸಾವು: ಮೃತದೇಹವನ್ನು ಸಗಣಿಯಲ್ಲಿಟ್ಟು ಮರುಜೀವ ಪಡೆಯಬಹುದೆಂದು ಕಾದ ಕುಟುಂಬ!

Date:

Advertisements

ಸಿಡಿಲು ಬಡಿದು ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ಕುಟುಂಬಸ್ಥರು ಸಗಣಿಯ ರಾಶಿಯಲ್ಲಿಟ್ಟು ಮೃತದೇಹ ಮರುಜೀವ ಪಡೆಯಬಹುದೆಂದು ಕಾದ ಘಟನೆ ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ನಡೆದಿದೆ. ಸಗಣಿಯಲ್ಲಿಟ್ಟರೆ ಮೃತದೇಹ ಜೀವಂತವಾಗುತ್ತದೆ ಎಂಬ ಮೌಢ್ಯ ನಂಬಿಕೆಯನ್ನು ಹೊಂದಿರುವ ಕುಟುಂಬಸ್ಥರ ಮನವೊಲಿಸಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಜಾರ್ಖಂಡ್‌ನ ಮಹದೇಹಾರ್‌ನ ರಾಮ್‌ಪುರ ಗ್ರಾಮದ ರೈತ ಮತ್ತು ಜಾನುವಾರು ಸಾಕಣೆದಾರ ರಾಮನಾಥ್ ಯಾದವ್ ಶನಿವಾರ ಸಂಜೆ ತಮ್ಮ ಪತ್ನಿ ಶೋಭಾ ದೇವಿ ಅವರೊಂದಿಗೆ ಜಾನುವಾರು ಮೇಯಿಸಲು ಹೋಗಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಮಹುದೇಹಾರ್ ಪೊಲೀಸ್ ಠಾಣೆಯ ಅಧಿಕಾರಿ ಮನೋಜ್ ಕುಮಾರ್ ಭಾನುವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರ | ಒಂದು ವಾರದಲ್ಲಿ 33 ಮಂದಿ ಸಿಡಿಲು ಬಡಿದು ಸಾವು

“ಸಂಬಂಧಿಕರು ಯಾದವ್ ಅವರನ್ನು ಚಿಕಿತ್ಸೆಗಾಗಿ ಮಹುವಾಡಂದ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ (CHC) ಕರೆದೊಯ್ದಿದ್ದು. ಅಲ್ಲಿ ವೈದ್ಯರು ಸಿಡಿಲು ಬಡಿದು ಯಾದವ್ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಶೋಭಾ ದೇವಿಯನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ” ಎಂದು ಹೇಳಿದ್ದಾರೆ.

“ಆದಾಗ್ಯೂ, ಮೂಢನಂಬಿಕೆಯನ್ನು ಹೊಂದಿರುವ ಕುಟುಂಬಸ್ಥರು ಪೊಲೀಸರಿಗೆ ತಿಳಿಸದೆ ಮೃತದೇಹವನ್ನು ಮನೆಗೆ ಕೊಂಡೊಯ್ದು ಗೋವಿನ ಸಗಣಿಯಲ್ಲಿರಿಸಿದ್ದಾರೆ. ಸಗಣಿಯಿಂದ ಸಿಡಿಲಿನ ಪರಿಣಾಮ ಕಡಿಮೆಯಾಗುತ್ತದೆ, ಇದರಿಂದಾಗಿ ಯಾದವ್ ಮತ್ತೆ ಜೀವಂತವಾಗುತ್ತಾರೆ ಎಂದು ಕುಟುಂಬಸ್ಥರು ನಂಬಿದ್ದರು” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

“ಮೃತದೇಹವನ್ನು ಸಂಬಂಧಿಕರು ತೆಗೆದುಕೊಂಡು ಹೋಗುತ್ತಿರುವ ಬಗ್ಗೆ ವೈದರು ನಮಗೆ ಮಾಹಿತಿ ನೀಡಿದರು. ನಾವು ಅವರ ಮನೆಗೆ ಹೋಗಿ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಹಸ್ತಾಂತರಿಸುವಂತೆ ಕೇಳಿಕೊಂಡೆವು. ಆದರೆ ಅವರು ಮೃತರು ಶೀಘ್ರದಲ್ಲೇ ಜೀವಂತವಾಗುವುದರಿಂದ ಕಾಯುವಂತೆ ಹೇಳಿದರು” ಎಂದು ಅಧಿಕಾರಿ ಮನೋಜ್ ಕುಮಾರ್ ಹೇಳಿದ್ದಾರೆ.

ವೈದ್ಯರು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ಸಹ ಮನೆಗೆ ತಲುಪಿ ಸಂಬಂಧಿಕರನ್ನು ದೇಹವನ್ನು ಹಸ್ತಾಂತರಿಸುವಂತೆ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಅದಕ್ಕೂ ಕುಟುಂಬಸ್ಥರು ಕೇಳಲಿಲ್ಲ. ಮಧ್ಯರಾತ್ರಿವರೆಗೂ ಮನವೊಲಿಸುವ ಯತ್ನ ಮಾಡುತ್ತಲೇ ಇದ್ದೆವು. ಬಳಿಕ ನಾವು ಕೊಂಚ ಬಲಪ್ರಯೋಗ ಮಾಡಬೇಕಾಯಿತು. ಅಂತಿಮವಾಗಿ ಅವರು ಸುಮ್ಮನಾದರು. ಭಾನುವಾರ ಮುಂಜಾನೆ ಮೃತದೇಹವನ್ನು ಲತೇಹರ್ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಸಿಡಿಲಿನಿಂದಾಗಿ ಸಂಭವಿಸಿದ ಸಾವಿಗೆ ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ನಿಯಮಗಳ ಅಡಿಯಲ್ಲಿ ಪರಿಹಾರವನ್ನು ಪಡೆಯಲು ಮರಣೋತ್ತರ ಪರೀಕ್ಷೆ ಅಗತ್ಯ ಎಂದು ಸಂಬಂಧಿಕರಿಗೆ ತಿಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X