ಬದಲಾದ‌ ಟ್ರಂಪ್‌ ವರಸೆಯನ್ನು ಭಾರತ ಬೇಗ ನಂಬಬಾರದು: ಕಾಂಗ್ರೆಸ್ ಸಂಸದ ಶಶಿ ತರೂರ್‌ ಸಲಹೆ

Date:

Advertisements

ಭಾರತ ಇಷ್ಟು ಬೇಗ ಟ್ರಂಪ್‌ ಅವರ ಬದಲಾದ ವರಸೆಯನ್ನು ನಂಬಬಾರದು ಎಂದು ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಸಲಹೆ ನೀಡಿದ್ದಾರೆ.

ಭಾರತ-ಅಮೆರಿಕ ಸಂಬಂಧದ ಬಗೆಗಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಬದಲಾದ ಧ್ವನಿ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಭಾರತದ ಬಗ್ಗೆ ಡೊನಾಲ್ಡ್‌ ಟ್ರಂಪ್‌ ಅವರ ಏಕಾಏಕಿ ಮೃದು ಧೋರಣೆ ಅನುಮಾನಾಸ್ಪದವಾಗಿದೆ” ಎಂದಿದ್ದಾರೆ.

“ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಬಂಧ ಸುಧಾರಣೆ ಪ್ರಕ್ರಿಯೆಯಲ್ಲಿ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು.

“ಸಂಬಂಧ ಸುಧಾರಣೆಯಲ್ಲಿ ನಾಯಕರು ಹೆಜ್ಜೆ ಇಡುವ ಮೊದಲು, ಉಭಯ ದೇಶಗಳ ರಾಜತಾಂತ್ರಿಕ ಅಧಿಕಾರಿಗಳು ಕೆಲವು ದುರಸ್ತಿ ಕಾರ್ಯಗಳನ್ನು ಮಾಡಬೇಕಿದೆ. ಡೊನಾಲ್ಡ್‌ ಟ್ರಂಪ್‌ ಅವರ ಸ್ನೇಹ ಸಂದೇಶಕ್ಕೆ ಪ್ರಧಾನಿ ಮೋದಿ ಇಷ್ಟು ಬೇಗ ಪ್ರತಿಕ್ರಿಯಿಸಬಾರದಿತ್ತು. ಹದಗೆಟ್ಟಿರುವ ಸಂಬಂಧಗಳನ್ನು ಮತ್ತೆ ಹಳಿಗೆ ತರುವಲ್ಲಿ ಅವಸರ ಒಳ್ಳೆಯದಲ್ಲ” ಎಂದು ಹೇಳಿದ್ದಾರೆ.

“ಸುಂಕ ಸಮರದಿಂದಾಗಿ ಭಾರತೀಯರು ಎದುರಿಸಿದ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು, ಟ್ರಂಪ್‌ ಅವರಿಂದ ಉಂಟಾದ ನೋವನ್ನು ಇಷ್ಟು ಬೇಗ ಮರೆಯಬಾರದು. ನಾನು ಡೊನಾಲ್ಡ್‌ ಟ್ರಂಪ್‌ ಅವರ ಸ್ನೇಹ ಸ್ವರವನ್ನು ಎಚ್ಚರಿಕೆಯ ಮನೋಭಾವದಿಂದ ಸ್ವಾಗತಿಸುತ್ತೇನೆ. ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಮಾಡುವ ಯಾವುದೇ ಅವಸರ, ನಮಗೆ ನಷ್ಟ ತರಬಹುದು” ಎಂದು ಶಶಿ ತರೂರ್‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ...

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

Download Eedina App Android / iOS

X