ಮದ್ದೂರು ಕಲ್ಲು ತೂರಾಟ | ಎರಡು ಪ್ರಕರಣ ದಾಖಲು, 21 ಜನರ ಬಂಧನ: ಮಂಡ್ಯ ಎಸ್​​ಪಿ ಬಾಲದಂಡಿ

Date:

Advertisements

ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಒಂದು ಮಸೀದಿಯ ಬಳಿ ಕಲ್ಲು ತೂರಾಟ ನಡೆದಿದೆ. ನಂತರ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಆ ವೇಳೆ ಕರೆಂಟ್ ಕೂಡ ಆಫ್ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಬಂಧಿಸಲಾಗಿದೆ ಎಂದು ಮಂಡ್ಯ ಎಸ್​​ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭಾನುವಾರ ರಾತ್ರಿ ನಡೆದ ಕಲ್ಲು ತೂರಾಟ ವಿಚಾರವಾಗಿ ಸೋಮವಾರ ಮಂಡ್ಯ ಎಸ್​​ಪಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

“ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಮಾಡಿಕೊಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿದೆ. ಹೆಚ್ಚಿನ ಆರೋಪಿಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ” ಎಂದರು.

“ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮದ್ದೂರು | ಬಿಜೆಪಿ ಪರ ಕಾರ್ಯಕರ್ತರಿಂದ ಪ್ರತಿಭಟನೆ, ಮತ್ತೆ ಕಲ್ಲು ತೂರಾಟ

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ರಾತ್ರಿ ಗಣೇಶ ಮುರ್ತಿ ವಿಸರ್ಜನಾ ಮೆರವಣಿಗೆ...

ಮದ್ದೂರು ಘಟನೆ | ಬಿಜೆಪಿ-ಜೆಡಿಎಸ್ ನಾಯಕರಿಂದ ಪ್ರಚೋದನೆ ಕೆಲಸ: ಸಚಿವ ಚಲುವರಾಯಸ್ವಾಮಿ

ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರಕ್ಕೆ ಸಚಿವ...

ಮದ್ದೂರು | ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಎಂಟು ಜನರಿಗೆ ಗಾಯ

ಮಂಡ್ಯ ಜಿಲ್ಲೆಯ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಗಣಪತಿ...

ಮಂಡ್ಯ | ಸೆ.13ಕ್ಕೆ ‘ಸ್ವರಾಜ್ ಉತ್ಸವ’ : ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ 'ಗಾಂಧೀಜಿಯವರ...

Download Eedina App Android / iOS

X