ಧರ್ಮಸ್ಥಳ ಆಸುಪಾಸಿನಲ್ಲಿ ಹಲವು ಮೃತದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಸಾಮಾಜಿಕ ಕಾರ್ಯಕರ್ತ ಜಯಂತ್ ಟಿ, ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಕಚೇರಿಗೆ ಹಾಜರಾಗಿದ್ದಾರೆ.
ಬೆಳಗ್ಗೆ ಸುಮಾರು 10 ಗಂಟೆ ಆಸುಪಾಸಿನಲ್ಲಿ ಜಯಂತ್ ಟಿ ಅವರು ಮಾಧ್ಯಮಗಳ ಕಣ್ಣು ತಪ್ಪಿಸಿ ಒಳದಾರಿ ಮೂಲಕ ಎಸ್‌ಐಟಿ ಕಚೇರಿಗೆ ತಲುಪಿದ್ದಾರೆ ಎನ್ನಲಾಗಿದೆ. ಐದನೇ ಬಾರಿಗೆ ಎಸ್‌ಐಟಿ ವಿಚಾರಣೆಗೆ ಜಯಂತ್ ಒಳಪಡುತ್ತಿದ್ದಾರೆ. ಇನ್ನು ಇಂದು ಬೆಳಗ್ಗೆ ಗಿರೀಶ್ ಮಟ್ಟಣ್ಣನವರ್ ಕೂಡಾ ಎಸ್ಐಟಿ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.
ಇದನ್ನು ಓದಿದ್ದೀರಾ? ಶಿವಮೊಗ್ಗ | ಧರ್ಮಸ್ಥಳ ಪ್ರಕರಣ; ಬಿಜೆಪಿಯಿಂದ ಪ್ರತಿಭಟನೆ
ಇಬ್ಬರೂ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ ನೀಡುವುದಾಗಿ ಹೇಳಿರುವ ಕಾರಣ ಇಬ್ಬರ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಈಗಾಗಲೇ ದೂರುದಾರ ಚಿನ್ನಯ್ಯ ತೋರಿಸಿದ ಸ್ಥಳದಲ್ಲಿ ಉತ್ಖನನ ಮಾಡಲಾಗಿದ್ದು, ಎರಡು ಸ್ಥಳಗಳಲ್ಲಿ ಮಾನವನ ಮೂಲೆಗಳು ಪತ್ತೆಯಾಗಿದೆ. ಅದಾದ ಬಳಿಕ ಸಾಕ್ಷಿ ದೂರುದಾರನ ಬಂಧಿಸಿದ ಎಸ್‌ಐಟಿ ವಿಚಾರಣೆ ನಡೆಸುತ್ತಿದೆ.
