ಕೋರ್ಟನ್ನು ರಾಜಕೀಯ ವೇದಿಕೆಯನ್ನಾಗಿಸಲು ಬಿಡಲ್ಲ: ತೆಲಂಗಾಣ ಸಿಎಂ ವಿರುದ್ಧದ ಬಿಜೆಪಿ ಅರ್ಜಿ ತಿರಸ್ಕರಿಸಿದ ಸುಪ್ರೀಂ

Date:

Advertisements

ನ್ಯಾಯಾಲಯವನ್ನು ರಾಜಕೀಯ ಹೋರಾಟಗಳಿಗೆ ವೇದಿಕೆಯನ್ನಾಗಿ ಬಳಸಲು ಅವಕಾಶ ನೀಡಲಾರೆವು. ರಾಜಕಾರಣಿಗೆ ತನ್ನ ವಿರೋಧಿಗಳ ಟೀಕೆಗಳನ್ನು ಸಹಿಸಿಕೊಳ್ಳುವ ಶಕ್ತಿ ಇರಬೇಕು ಎಂದು ಸೋಮವಾರ ಹೇಳಿರುವ ಸುಪ್ರೀಂ ಕೋರ್ಟ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಬಿಜೆಪಿ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಿದೆ.

ಬಿಜೆಪಿಯ ತೆಲಂಗಾಣ ಘಟಕವು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿತ್ತು. ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಕೊನೆಗೊಳಿಸುತ್ತದೆ ರೇವಂತ್ ರೆಡ್ಡಿ ಹೇಳಿದ್ದು, ಅದು ಸುಳ್ಳು ಎಂದು ಹೇಳಿಕೊಂಡು ಬಿಜೆಪಿ ಮಾನನಷ್ಟ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಈ ಮೊಕದ್ದಮೆಯನ್ನು ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್‌ನ ಆದೇಶದ ವಿರುದ್ಧ ಬಿಜೆಪಿಯ ತೆಲಂಗಾಣ ಘಟಕವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇದನ್ನು ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಪೀಠ ತಿರಸ್ಕರಿಸಿದೆ.

ಇದನ್ನು ಓದಿದ್ದೀರಾ? ತೆಲಂಗಾಣಕ್ಕೆ ನೀಡಿರುವ 6 ಗ್ಯಾರಂಟಿ ಶೀಘ್ರ ಜಾರಿ: ಕಾಂಗ್ರೆಸ್‌ ನಾಯಕ ರೇವಂತ್ ರೆಡ್ಡಿ

2024ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರೇವಂತ್ ರೆಡ್ಡಿ ಮಾಡಿದ ಭಾಷಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಈ ಅರ್ಜಿ ವಿಚಾರಣೆ ನಡೆಸಿದ ಪೀಠ, “ನ್ಯಾಯಾಲಯಗಳು ರಾಜಕೀಯ ಹೋರಾಟಗಳಿಗೆ ವೇದಿಕೆಯಾಗಲು ಅವಕಾಶ ನೀಡುವುದಿಲ್ಲ ಎಂದು ಈ ಹಿಂದೆಯೇ ಸಿಇಜೆಐ ಹಲವು ಬಾರಿ ಹೇಳಿದ್ದರು. ನೀವು ರಾಜಕಾರಣಿಯಾಗಿದ್ದರೆ, ಇದನ್ನೆಲ್ಲ ಸಹಿಸಿಕೊಳ್ಳುವ ಧೈರ್ಯ ನಿಮಗಿರಬೇಕು” ಎಂದು ಹೇಳಿದೆ.

2024ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರೇವಂತ್ ಹೇಳಿಗಳ ವಿರುದ್ಧ ತೆಲಂಗಾಣ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಸಮ್ ವೆಂಕಟೇಶ್ವರಲು ಅವರು ದೂರು ದಾಖಲಿಸಿದ್ದರು. ಆಗಸ್ಟ್ 1ರಂದು, ತೆಲಂಗಾಣ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ. ಲಕ್ಷ್ಮಣ್ ಅವರು ತೆಲಂಗಾಣ ಸಿಎಂ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

Download Eedina App Android / iOS

X