ರಾಜ್ಯದಲ್ಲಿ 5.20 ಲಕ್ಷ ಹೆಕ್ಟೇರ್ ಬೆಳೆ ಹಾನಿ, 1.52 ಕೋಟಿ ರೂ. ಪರಿಹಾರ ವಿತರಣೆ: ಸಿದ್ದರಾಮಯ್ಯ

Date:

Advertisements

ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಮತ್ತು ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಈ ವೇಳೆ ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, 8 ಕ್ರಸ್ಟ್‌ಗೇಟ್‌ ಅಳವಡಿಕೆಗೆ ಸಿದ್ಧವಿದೆ ಎಂದು ಸಭೆಗೆ ಅಧಿಕಾರಿಗಳು ವಿವರಿಸಿದರು.

ಕ್ರೆಸ್ಟ್ ಗೇಟ್‌ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅದೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಇದು ಮಂಡಳಿಯ ಜವಾಬ್ದಾರಿ. ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು. ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮರ್ಥ್ಯ 895.62 ಟಿಎಂಸಿ ಇದ್ದು, ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ ಸಂಗ್ರಹ ಇತ್ತು. ತುಂಗಾ ಭದ್ರಾ ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ನೀರು ಹರಿಸುವ ಪೂರ್ವದಲ್ಲೇ ಎಲ್ಲಾ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

ಮಳೆ ಹಾನಿಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಂಗಾರು ಹಂಗಾಮಿನಲ್ಲಿ ಶೇ.98 ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ 82.50 ಲಕ್ಷ ಹೆಕ್ಟೇರ್ ಇದ್ದು, 80.76 ಲಕ್ಷ ಹೆಕ್ಟೇರ್ ವಾಸ್ತವಿಕ ಬಿತ್ತನೆಯಾಗಿದೆ. ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 480256 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 40407 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 520663 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಸಿಎಂ ಹೇಳಿದರು.

ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111ಮಂದಿ ಸಾವನ್ನಪ್ಪಿದ್ದು ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು 5.55ಕೋಟಿ ಪರಿಹಾರ ನೀಡಲಾಗಿದೆ. 651ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು. ಈ ಅವಧಿಯಲ್ಲಿ ಒಟ್ಟು 766 ಜಾನುವಾರುಗಳು ಸಾವಿಗೀಡಾಗಿದ್ದು, ಒಟ್ಟು 1.52 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ಸಿಎಂ ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X