BREAKING NEWS | ಚುನಾವಣಾ ಆಯೋಗ ಆಧಾರ್ ಅನ್ನು ಗುರುತಿನ ಪುರಾವೆಯಾಗಿ ಸ್ವೀಕರಿಸಲೇಬೇಕು: ಸುಪ್ರೀಂ

Date:

Advertisements

ಬಿಹಾರದ ತೀವ್ರ ಪರಿಷ್ಕರಣೆಯ ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಗುರುತನ್ನು ಸ್ಥಾಪಿಸಲು ಆಧಾರ್ ಅನ್ನು ಗುರುತಿನ ದಾಖಲೆಯಾಗಿ ಪರಿಗಣಿಸಬೇಕೆಂದು ಭಾರತದ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಬಿಹಾರ ರಾಜ್ಯದ ಮತದಾರರ ಪಟ್ಟಿಯ ಎಸ್‌ಐಆರ್‌ಗೆ ಸಂಬಂಧಿಸಿದ ವಿಚಾರಣೆಯಲ್ಲಿ ಆಧಾರ್ ಕಾರ್ಡ್ ಅನ್ನು 12ನೇ ದಾಖಲೆಯಾಗಿ ಸ್ವೀಕರಿಸಬೇಕೆಂದು ಸುಪ್ರೀಂ ಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ. ಹಾಗೆಯೇ ಇದು ಪೌರತ್ವದ ಸಾಬೀತಿನ ದಾಖಲೆಯಾಗಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಚುನಾವಣಾ ಆಯೋಗ ಕೂಡ ಆಧಾರ್‌ ಅನ್ನು ಗುರುತಿನ ಪುರಾವೆಯಾಗಿ ಸ್ವೀಕರಿಸಲು ಸುಪ್ರೀಂ ಕೋರ್ಟ್‌ ಮುಂದೆ ಒಪ್ಪಿಕೊಂಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠವು ಮಧ್ಯಂತರ ಆದೇಶ ಹೊರಡಿಸಿದೆ.

ಚುನಾವಣೆ ಆಯೋಗವು ಸಲ್ಲಿಸಿದ ಟಿಪ್ಪಣಿಯ ಕುರಿತು ಆರ್‌ಜೆಡಿ , ಎಐಎಂಐಎಂ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಹಾಗೂ ಇತರ ಅರ್ಜಿದಾರರ ಪ್ರಕರಣವನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ನಿರ್ಧಾರ ಕೈಗೊಂಡಿದೆ.

ಚುನಾವಣಾ ಆಯೋಗವು ಬಿಹಾರದ ಎಸ್‌ಐಆರ್‌ಗೆ ಸಂಬಂಧಿಸಿದಂತೆ ಪ್ರಕಟಿಸಿದ ಟಿಪ್ಪಣಿಯಲ್ಲಿ, ಕರಡು ಮತದಾರರ ಪಟ್ಟಿಯಲ್ಲಿರುವ 7.24 ಕೋಟಿಯ ಮತದಾರರಲ್ಲಿ ಶೇ. 99.5 ಶೇಕಡಾ ಮಂದಿ ತಮ್ಮ ಅರ್ಹತಾ ದಾಖಲೆಗಳನ್ನು ಎಸ್‌ಐಆರ್ ಅಡಿಯಲ್ಲಿ ಸಲ್ಲಿಸಿದ್ದಾರೆ ಎಂದು ತಿಳಿಸಿದೆ.

ಹೆಚ್ಚಿನ ಅಪ್‌ಡೇಟ್‌ಆಗಿ ನಿರೀಕ್ಷಿಸಿ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

Download Eedina App Android / iOS

X