ಧಾರವಾಡ | ಎಸ್‍ಟಿ ‍ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹ

Date:

Advertisements

ಸಪ್ತಾಪುರದಲ್ಲಿರು ಎಸ್‍ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಇಂದು (ಸೆ.8) ಜಿಲ್ಲಾಧಿಕಾರಿ ಕಚೇರಿ ಎದರಿಗೆ ಎಐಡಿಎಸಓ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಮಾತನಾಡಿ, ವಿದ್ಯಾಕಾಶಿ ಎಂದು ಹೆಸರು ಪಡೆದ ಧಾರವಾಡದಲ್ಲಿ ಪ್ರತಿ ವರ್ಷದಿಂದ ವರ್ಷಕ್ಕೆ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಲು ಇಲ್ಲಿಗೆ ಬರುವ ಸಂಖ್ಯೆ ಹೆಚ್ಚಾಗುತ್ತಿದೆ. ಕಾಲೇಜಿನಲ್ಲಿ ಪ್ರವೇಶ ಪಡೆದರೂ ವಸತಿ ಸೌಲಭ್ಯಕ್ಕೆ ಹಾಸ್ಟೆಲ್ ಸಿಗದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹಾಸ್ಟೆಲ್ ದೊರೆತರೂ ಅಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳು ಖಾತ್ರಿಯಾಗದೆ ಇರುವುದು ವಿಷಾದನೀಯ. ಇದಕ್ಕೆ ಧಾರವಾಡದ ಸಪ್ತಾಪುರದ ಎಸ್ ಟಿ ಬಾಲಕರ ಹಾಸ್ಟೆಲ್ ಹೊರತಾಗಿಲ್ಲ. ಹಾಸ್ಟೆಲ್ ನಲ್ಲಿ ಗುಣಮಟ್ಟದ ಆಹಾರ ವ್ಯವಸ್ಥೆ, ಸ್ವಚ್ಛತೆ ಇಲ್ಲದೆ ಇರುವುದು ಹಾಗೂ ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಡ ವಿದ್ಯಾರ್ಥಿಗಳ ಪರ ನಿಲುವನ್ನು ತೆಗೆದುಕೊಳ್ಳಬೇಕಾದ ಸರ್ಕಾರವು, ಶಿಕ್ಷಣವನ್ನು ಖಾತ್ರಿ ಪಡಿಸುವ ಬದಲಾಗಿ ವಿದ್ಯಾರ್ಥಿಗಳನ್ನು ಅತಂತ್ರಕ್ಕೆ ತಳ್ಳುತ್ತಿದೆ, ಸರ್ಕಾರದ ಈ ಧೋರಣೆಯು ಖಂಡನೀಯ ಎಂದರು.

ಹಾಸ್ಟೆಲ್‌ನಲ್ಲಿ ಗುಣಮಟ್ಟದ ಆಹಾರವನ್ನು ಖಾತ್ರಿಪಡಿಸಬೇಕು. ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಅವಶ್ಯಕತೆಗೆ ತಕ್ಕಂತೆ ಬಾತ್ ರೂಮ್ ಮತ್ತು ಶೌಚಾಲಯಗಳನ್ನು ನಿರ್ಮಿಸಬೇಕು. ಹಾಸ್ಟೆಲಲ್ಲಿ ಗ್ರಂಥಾಲಯವನ್ನು ನಿರ್ಮಿಸಬೇಕು. ಮಳೆಯಿಂದ ಸೋರುತ್ತಿರುವ ಕಟ್ಟಡವನ್ನು ದುರಸ್ತಿಗೊಳಿಸಬೇಕು. ಕುಡಿಯುವ ನೀರಿನ ಘಟಕ ನಿರ್ಮಿಸಬೇಕು ಎಂದು ವಿವಿಧ ಬೇಡಿಕೆಗಳನ್ನಿತ್ತು ವಿದ್ಯಾರ್ಥಿಗಳು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಲಸಿಕೆಯಿಂದ ಆರಂಭದಲ್ಲೆ ಸೋಂಕು ತಡೆಗಟ್ಟುಬಹುದು: ಡಾ.‌ರತ್ನಮಾಲಾ

ಮನವಿ ಪತ್ರವನ್ನು ಸ್ವೀಕರಿಸಲು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆಯ ತಾಲೂಕ ಅಧಿಕಾರಿ ಮಧು ಸಣ್ಣೇರಿ ಮಾತನಾಡಿ, ಈ ಕೂಡಲೇ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಛೇರಿ ಕಾರ್ಯದರ್ಶಿ ಸ್ಫೂರ್ತಿ ಚಿಕ್ಕಮಠ, ಕಾರ್ಯಕರ್ತ ಸಿದ್ದು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

Download Eedina App Android / iOS

X