ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳಿಗೆ ತುರ್ತು ಮತ್ತು ಹೆಚ್ಚಿನ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರಣ್ಯ , ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮನವಿ ಮಾಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ 2025ರ ಮುಂಗಾರು ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಕೈಗೊಳ್ಳಲಾದ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ವೀಡಿಯೊ ಕಾನ್ಫರೆನ್ಸ್ ಸಭೆಯ ಉದ್ದೇಶಿಸಿ ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆಸಿದರು.
ʼಜಿಲ್ಲೆಯ ಪ್ರವಾಹ ಪರಿಸ್ಥಿತಿ, ಹಾನಿಗೊಳಗಾದ ಗ್ರಾಮಗಳು, ಮೂಲಸೌಕರ್ಯ, ಬೆಳೆ, ಮನೆ ಮತ್ತು ಇತರ ಹಾನಿ ಹಾಗೂ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದ ಅವರು, ತುರ್ತು ಪರಿಹಾರ ಕಾರ್ಯಗಳಿಗೆ ಹೆಚ್ಚಿನ ನೆರವು ಒದಗಿಸಲು ಹಾಗೂ ಹಾನಿಗೊಳಗಾದ ಕುಟುಂಬಗಳ ಪುನರ್ವಸತಿ ಕಾರ್ಯಗಳನ್ನು ತ್ವರಿತಗೊಳಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕುʼ ಎಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್ ಜೈನ್ ಹಾಗೂ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಬೀದರ್ | ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ.17ಕ್ಕೆ ಸಿಎಂ ಭೇಟಿ