ಹುಬ್ಬಳ್ಳಿ ಸಿದ್ಧಾರೂಢಸ್ವಾಮಿ ರೈಲ್ವೆ ನಿಲ್ದಾಣದ ಸುರಂಗ ಪಾದಚಾರಿ ಮಾರ್ಗದ ಬಳಿ ಇಡಲಾಗಿದ್ದ ಅನಾಮಧೇಯ ಬ್ಯಾಗ್‌ನಲ್ಲಿ ಅಂದಾಜು 11 ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ಪತ್ತೆಯಾಗಿದೆ.
ಆರ್‌ಪಿಎಫ್ ಪೊಲೀಸರು ವಶಪಡಿಸಿಕೊಂಡು ತಪಾಸಣೆ ಮಾಡುತ್ತಿರುವ ಸಂದರ್ಭದಲ್ಲಿ ಆ ನಾಮಧೇಯ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಪ್ಲಾಸ್ಟಿಕ್ ಟೇಪ್‌ನಿಂದ ಸುತ್ತಿಡಲಾಗಿದ್ದ 10 ಗಾಂಜಾ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಅವನ್ನು ಧಾರವಾಡ ಜಿಲ್ಲಾ ಅಬಕಾರಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.