ಕಲಬುರಗಿ | ಕ್ಷುಲಕ ಕಾರಣಕ್ಕೆ ಜಗಳ : ಇಬ್ಬರು ಕಾರ್ಮಿಕರ ಕೊಲೆ

Date:

Advertisements

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಕೋಡ್ಲಾ–ಬೆನಕನಹಳ್ಳಿ ಗ್ರಾಮದ ಶ್ರೀ ಸಿಮೆಂಟ್ ಕಂಪನಿಯ ಕಾಲೊನಿಯಲ್ಲಿ ಸೋಮವಾರ ಬೆಳಿಗ್ಗೆ ಕ್ಷುಲ್ಲಕ ಕಾರಣಕ್ಕೆ ಆರಂಭಗೊಂಡ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ.

ಶ್ರೀ ಸಿಮೆಂಟ್ ಕಂಪನಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ‌ ಛತ್ತೀಸಗಡ ಮೂಲದ ಗೋಪಾಲ ಪಟೇಲ್ (31), ಗೋಪಾಲ‌ ವರ್ಮಾ (29) ಮೃತ ಕಾರ್ಮಿಕರು ಎಂದು ತಿಳಿದು ಬಂದಿದೆ.

ಕಾರ್ಮಿಕರ ಮಧ್ಯೆ ಅಡುಗೆ ವಿಷಯಕ್ಕೆ ಸಂಬಂಧಿಸಿದಂತೆ ನಿತ್ಯ ಜಗಳವಾಗುತ್ತಿತ್ತು. ಭಾನುವಾರ ರಾತ್ರಿ ಜಗಳ ತಾರಕ್ಕೇರಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿಜಯ ನಶಾದ ಎಂಬ ಕಾರ್ಮಿಕ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ನೇತ್ರತ್ವದಲ್ಲಿ ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್ಐ ಉಪೇಂದ್ರ, ಶರಣಪ್ಪ ಜಾಕನಳ್ಳಿ ಹಾಗೂ ಪೊಲೀಸ್‌ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

Download Eedina App Android / iOS

X