ಕೋರ್ಟ್ ಮೇಲ್ವಿಚಾರಣೆಯಲ್ಲಿ ಇವಿಎಂ ತಾಂತ್ರಿಕ ಪರಿಶೋಧನೆ ನಡೆಯಲಿ: ಪ್ರಿಯಾಂಕ್ ಖರ್ಗೆ

Date:

Advertisements

ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂಗಳು) ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತಾಂತ್ರಿಕ ಆಡಿಟ್ ಜೊತೆಗೆ ನ್ಯಾಯಾಂಗ, ಶೈಕ್ಷಣಿಕ ಮತ್ತು ಕೈಗಾರಿಕಾ ಮೇಲ್ವಿಚಾರಣೆಯಲ್ಲಿ ನೈತಿಕ ಹ್ಯಾಕಥಾನ್ ನಡೆಸಲು ಅನುಮತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ.

ಹಾರ್ಡ್ವೇರ್‌ ಮತ್ತು ಫರ್ಮ್ವೇರ್ನಿಂದ ಚಿಹ್ನೆ-ಲೋಡಿಂಗ್, ಸಂಗ್ರಹಣೆ, ಚಲನೆ ಮತ್ತು ಎಣಿಕೆ ಪ್ರಕ್ರಿಯೆಗಳವರೆಗೆ ಸಂಪೂರ್ಣ ಇವಿಎಂ-ವಿವಿಪ್ಯಾಟ್ ಪ್ರಕ್ರಿಯೆಗಳನ್ನು ಸಂಸ್ಥೆಯ ನೇತೃತ್ವದಲ್ಲಿ ಪಾರದರ್ಶಕ ಮೌಲ್ಯಮಾಪನ ಮಾಡುವಂತೆ ಕೋರಿ ಅವರು 2024ರ ಡಿ.3ರಂದು ಭಾರತೀಯ ಚುನಾವಣಾ ಆಯೋಗದ ಮುಂದೆ ಅಧಿಕೃತ ಪ್ರಸ್ತಾವನೆಯನ್ನು ಪ್ರಿಯಾಂಕ್ ಖರ್ಗೆ ಮಂಡಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಿಜೆ ಬ್ಯಾನ್‌ನಿಂದ ಕಲೆಗೆ ಪ್ರೋತ್ಸಾಹ, ಕೋಮು ಉದ್ವಿಗ್ನತೆಗೆ ಕಡಿವಾಣ

ಆ ಪ್ರಸ್ತಾವನೆಯ ಆಧಾರದ ಮೇಲೆ, ಪ್ರಿಯಾಂಕ್ ಖರ್ಗೆ ಸೆ.6ರಂದು ಪತ್ರವೊಂದನ್ನು ಹೊರಡಿಸಿ, ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ರಾಜ್ಯ ಸರಕಾರವು ಪ್ರಮುಖ ಸಂಸ್ಥೆಗಳು (ಐಐಎಸ್ಸಿ, ಐಐಟಿಗಳು, ಐಐಐಟಿಗಳು) ಮತ್ತು ಹೆಸರಾಂತ ಆರ್ ಅಂಡ್ ಡಿ ಕಾರ್ಪೊರೇಟ್ ಸಂಸ್ಥೆಗಳೊಂದಿಗೆ ಸಮಯಕ್ಕೆ ಸೀಮಿತವಾದ, ಸ್ವತಂತ್ರವಾಗಿ ಮೇಲ್ವಿಚಾರಣೆ ಮಾಡಲಾದ ತಾಂತ್ರಿಕ ಪರಿಶೋಧನೆಯನ್ನು ನಡೆಸಲು ಅನುಮತಿಸುವಂತೆ ಒತ್ತಾಯಿಸಿದ್ದಾರೆ.

‘ವೋಟ್ ಚೋರಿ’ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆಂಗಳೂರಿನ ಮಹದೇವಪುರದಲ್ಲಿ ನಡೆದ ಅಕ್ರಮಗಳು, ಹರಿಯಾಣದ ಪಾಣಿಪತ್ ನಲ್ಲಿ ಇವಿಎಂಗಳ ಮರು ಎಣಿಕೆ ಮತ್ತು ಕಲಬುರಗಿಯ ಆಳಂದದಲ್ಲಿ ನಡೆದ ಮತದಾರರ ಹೆಸರನ್ನು ಕೈಬಿಟ್ಟಿರುವ ವಂಚನೆಯ ಹಿನ್ನೆಲೆಯಲ್ಲಿ ಸಚಿವರು ಈ ಒತ್ತಾಯವನ್ನು ಮಾಡಿದ್ದಾರೆ.

ಈ ಉದ್ದೇಶವು ಪಕ್ಷಪಾತವಲ್ಲ, ಪ್ರಜಾಪ್ರಭುತ್ವದ ಮೇಲೆ ಸಾರ್ವಜನಿಕರ ನಂಬಿಕೆಯನ್ನು ಬಲಪಡಿಸುವುದು ಎಂದು ಪ್ರಿಯಾಂಕ್ ಖರ್ಗೆ ಒತ್ತಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

Download Eedina App Android / iOS

X