ಕಾಫಿ ನಾಡಿನಲ್ಲಿ ದಿನದಿಂದ ದಿನಕ್ಕೆ ಕಾಡಾನೆ ಕಿರುಕುಳದಿಂದ ರೈತರ ಕೃಷಿ ಭೂಮಿಯಲ್ಲಿ ಬೆಳೆದಿರುವಂತಹ ಬೆಳೆಗಳು ನಾಶವಾಗುತ್ತಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ಬೆಳಗೋಡು ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೂ ಕೂಡ ಸಂಕಟ ಎದುರಾಗಿದೆ.
ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ವಿದ್ಯುತ್ ಸ್ಪರ್ಶ: ಹೊತ್ತಿ ಉರಿದ ಪ್ಯಾನಲ್ ಬೋರ್ಡ್
ಕಾಡಾನೆಗಳು ಕಾಫಿ, ಅಡಕೆ, ಬಾಳೆ ಬೆಳೆಗಳನ್ನು ನಾಶ ಮಾಡುತ್ತಿವೆ. ಇತ್ತೀಚಿಗೆ ಗದ್ದೆ ನಾಟಿ ಮಾಡಿರುವ ಗದ್ದೆಗಳನ್ನು ತುಳಿದು ನಾಶ ಮಾಡುತ್ತಿವೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆನೆ ನಿಗ್ರಹ ಪಡೆಯ ಸದಸ್ಯರು ಪಟಾಕಿ ಹೊಡೆಯುದನ್ನು ಬಿಟ್ಟು ಬೇರೆ ಏನು ಮಾಡುತ್ತಿಲ್ಲ ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
