ರಾಯಚೂರು | ವಿಮುಕ್ತ ದೇವದಾಸಿಯರ ಸೆ.15ರಿಂದ ಸಮೀಕ್ಷೆ; ವಿವರ ನೀಡಿ : ಎಂಆರ್ ಬೇರಿ ಸಲಹೆ

Date:

Advertisements

ಸೆಪ್ಟಂಬರ್ 15ರಿಂದ 45ದಿನಗಳವರೆಗೆ ದೇವದಾಸಿ ಅಭಿವೃದ್ಧಿ ನಿಗಮದಿಂದ ವಿಮುಕ್ತ ದೇವದಾಸಿಯರ ಸಮೀಕ್ಷೆ ನಡೆಯಲಿದ್ದು, ಪಟ್ಟಿಯಲ್ಲಿ ಬಿಟ್ಟು ಹೋದ ವಿಮುಕ್ತ ದೇವದಾಸಿಯರ ಕುಟುಂಬ ಸದಸ್ಯರ ಹೆಸರು ಸೇರಿಸಿ ಸೌಲಭ್ಯ ಪಡೆಯಲು ಮುಂದಾಗಬೇಕು ಎಂದು ವಿಮುಕ್ತ ದೇವದಾಸಿ ತಾಯಂದಿರ ಮತ್ತು ಮಕ್ಕಳ ವೇದಿಕೆಯ ಸಲಹೆಗಾರ ಎಂ.ಆರ್.ಭೇರಿ ತಿಳಿಸಿದರು.

ಅವರಿಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ, 2023-24ರ ರಾಜ್ಯ ಬಜೆಟ್‍ನಲ್ಲಿ ದೇವದಾಸಿ ವಿಮುಕ್ತ ಮಹಿಳೆಯರಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿತ್ತು. ದೇವದಾಸಿಯರ ಮಕ್ಕಳ ಹಾಗೂ ಮೊಮ್ಮಕ್ಕಳ ಹೆಸರನ್ನೂ ಸೇರ್ಪಡೆಗೊಳಿಸಬೇಕು ಎಂದು ರಾಜ್ಯದಲ್ಲಿ ಸಮಗ್ರ ದೇವದಾಸಿ ಪುನರ್ವಸತಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಆದರೆ ಅನೇಕರು ಸೌಲಭ್ಯದಿಂದ ವಂಚಿತರಾಗಿದ್ದಾರೆ ಎಂದು ದೂರಿದರು.

ರಾಜ್ಯದ ಬೆಳಗಾವಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್, ಶಿವಮೊಗ್ಗ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ದೇವದಾಸಿ ಮಹಿಳೆಯರಿದ್ದು, ಸುಮಾರು 40 ಸಾವಿರಕ್ಕೂ ಹೆಚ್ಚು ಕುಟುಂಬಗಳಿವೆ. ರಾಯಚೂರು ಜಿಲ್ಲೆಯಲ್ಲಿ ಸುಮಾರು 3000 ಕುಟುಂಬಗಳಿದ್ದು, ಪುನರ್ವಸತಿ ಸೌಲಭ್ಯಗಳು ಪಡೆಯಲು ಅರ್ಹರು ವಂಚಿತರಾಗುತ್ತಿದ್ದು ನಕಲಿ ಫಲಾನುಭವಿಗಳ ಪಾಲಾಗುತ್ತಿದೆ ಹೀಗಾಗಿ ಸರ್ಕಾರ ಸಮೀಕ್ಷೆಗೆ ಮುಂದಾಗಿದೆ ಎಂದು ಹೇಳಿದರು.

ವಿಮುಕ್ತ ದೇವದಾಸಿಯರ ಹೆಣ್ಣು ಮಕ್ಕಳನ್ನು ಮದುವೆಯಾದರೆ ರೂ. 5 ಲಕ್ಷ ಹಾಗೂ ಗಂಡು ಮದುವೆಯಾದರೆ 3 ಲಕ್ಷ ಸಹಾಯಧನ ನೀಡಲಾಗುತ್ತದೆ. ಗಂಡು ಮತ್ತು ಹೆಣ್ಣು ಇಬ್ಬರೂ ದೇವದಾಸಿ ಮಕ್ಕಳಾದರೆ ಅವರ ಮದುವೆ 5 ಲಕ್ಷ ಸಹಾಯಧನ ನೀಡಬೇಕೆನ್ನುವ ಬೇಡಿಕೆ ಸರ್ಕಾರದ ಮುಂದೆ ವೇದಿಕೆಯಿಂದ. ಇಡಲಾಗಿದೆ. ಸಮಗ್ರ ದೇವದಾಸಿ ಕಾಯ್ದೆಗೆ ನಿಯಮಗಳನ್ನು ಸರ್ಕಾರ ರೂಪಿಸಿಲ್ಲ ಕೂಡಲೇ ನಿಯಮಗಳನ್ನು ರೂಪಿಸಬೇಕು. ಜೊತೆಗೆ ಜಿಲ್ಲೆಯಲ್ಲಿ ಸಮೀಕ್ಷೆಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗಿಲ್ಲ ಕೂಡಲೇ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಬೇಕೆಂದು ಮನವಿ ಮಾಡಿದರು.

ಈ ಮುಂಚೆ ದೇವದಾಸಿ ಮಕ್ಕಳ ತಂದೆಯ ಹೆಸರನ್ನು ಸೇರಿಸಲು ಮಕ್ಕಳಿಗೆ ಮುಜುಗರ ಉಂಟಾಗುತ್ತಿತ್ತು. ಇದೀಗ ಕಾಯ್ದೆಯಲ್ಲಿ ಇದಕ್ಕೆ ಅವಕಾಶ ನೀಡಲಾಗಿದೆ. ತಂದೆ ಯಾರೆಂದು ಗೊತ್ತಿದ್ದರೆ. ಅವರ ಹೆಸರನ್ನು ಸೇರಿಸಬಹುದಾಗಿದೆ ಮತ್ತು ಆಸ್ತಿಯಲ್ಲೂ ಪಾಲು ಕೇಳಲು ಕಾಯ್ದೆ ಅನುಕೂಲ ಕಲ್ಪಿಸಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗ್ಯಾರಂಟಿ ಯೋಜನೆ ಹಣವನ್ನು ಸಾಲಕ್ಕೆ ಹೊಂದಾಣಿಕೆ ಮಾಡಬೇಡಿ – ಪಾಮಯ್ಯ ಮುರಾರಿ

ವೇದಿಕೆ ಸಂಚಾಲಕಿ ನಾಗರತ್ನ, ಹುಚ್ಚಾರೆಡ್ಡಿ, ಹುಲಿಗೆಮ್ಮ, ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X