ಶಿವಮೊಗ್ಗದ ಖ್ಯಾತ ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ. ಗೀತಾ ರವಿ ಹಾಗೂ ಡಾ. ಅಮಿತಾ ಹೆಗ್ಡೆಯವರು ಸುಮಾರು ಮೂವತ್ತೈದು ವರ್ಷಗಳ ಸುದೀರ್ಘ ಅನುಭವವನ್ನು ಹೊಂದಿದ್ದು, 20 ವರ್ಷಗಳಿಂದ ನೋವು ರಹಿತ ಹೆರಿಗೆಯಲ್ಲಿ ವಿಶೇಷ ಪರಿಣಿತರಾಗಿರುತ್ತಾರೆ.
ಅಲ್ಲದೇ ಬಂಜೆತನ ನಿವಾರಣೆ ಹಾಗೂ ಲ್ಯಾಪ್ರೋಸ್ಕೋಪಿಕ್ ತಜ್ಞರಾಗಿ ಸೇವೆ ಸಲ್ಲಿಸಿದ್ದಾರೆ. ಈ ವೈದ್ಯರುಗಳು ಇದೀಗ ಪೂರ್ಣಾವಧಿಯಾಗಿ ಮಾತೃವಾತ್ಸಲ್ಯ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ ಎಂದು ಮಾತೃವಾತ್ಸಲ್ಯ ಆಸ್ಪತ್ರೆಯ ನಿರ್ದೇಶಕರಾದ ಡಾ. ಪೃಥ್ವಿ ಬಿ. ಸಿ. ಇವರು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾತೃವಾತ್ಸಲ್ಯ ಆಸ್ಪತ್ರೆಯಲ್ಲಿ ಯಶಸ್ವಿನಿ ಯೋಜನೆ ಸೇರಿದಂತೆ ಹಲವು ಖಾಸಗಿ ವಿಮಾ ಸೌಲಭ್ಯಗಳು ಕೂಡ ಜಾರಿಯಲ್ಲಿದ್ದು, ಅರ್ಹರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದರು.
ಮಾತೃವಾತ್ಸಲ್ಯ ಆಸ್ಪತ್ರೆಯಲ್ಲಿ ಅತೀ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆ ಹಾಗೂ ಸಹಜ ಹೆರಿಗೆ ಸೌಲಭ್ಯ ಲಭ್ಯವಿದೆ. ಡಾ.ಗೀತಾ ರವಿ ಹಾಗೂ ಡಾ. ಅಮಿತಾ ಹೆಗ್ಡೆ ಇವರುಗಳ ಪಾಲ್ಗೊಳ್ಳುವಿಕೆಯಿಂದಾಗಿ ರೋಗಿಗಳಿಗೆ ಭರವಸೆಯ ಚಿಕಿತ್ಸೆ ಸಲಹೆ ಸಿಗಲಿದೆ ಎಂದರು.
ವಿಶೇಷವಾಗಿ ರೋಗಿಗಳಿಗಾಗಿ ರಿಯಾಯಿತಿಯ “ಮಾತೃವಾತ್ಸಲ್ಯ ಆರೋಗ್ಯ ಕಾರ್ಡ್” ಜಾರಿಗೊಳಿಸಲಾಗಿದ್ದು, ಆಸಕ್ತರು ಆಸ್ಪತ್ರೆಯಲ್ಲಿ ಪಡೆದುಕೊಳ್ಳಬಹುದು ಎಂದು ಮನವಿ ಮಾಡಿದ ಅವರು ಈ ಕಾರ್ಡ್ ಮೂಲಕ ಒಳರೋಗಿ ಹಾಗೂ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ ವಿಭಾಗದಲ್ಲಿ ರಿಯಾಯಿತಿ ಪಡೆಯಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಾ. ಗೀತಾ ರವಿ ಹಾಗೂ ಡಾ. ಅಮಿತಾ ಹೆಗ್ಡೆರವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಹಾಗೂ ಡಾ. ನಾಗಮಣಿ ಎಂ. ಸಿ. ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಉಪಸ್ಥಿತರಿದ್ದರು.