ಉಡುಪಿ | ಗುಲ್ವಾಡಿ ಪ್ರಶಸ್ತಿಗೆ ಧರಣಿದೇವಿ ಮಾಲಗತ್ತಿ, ರಫೀ ಪಾಷಾ ಆಯ್ಕೆ

Date:

Advertisements

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಂದಾಪುರದ ಗುಲ್ವಾಡಿ ಟಾಕೀಸ್ ಮತ್ತು ಕೋಟದ ಉಸಿರು ಅಧ್ಯಯನ ಕೇಂದ್ರಗಳು ನೀಡುವ 2024 ನೇ ಸಾಲಿನ ಪ್ರತಿಷ್ಠಿತ ಸಂತೋಷ ಕುಮಾರ ಗುಲ್ವಾಡಿ ಪ್ರಶಸ್ತಿಗೆ ಸಾಹಿತಿ ಮೊಹಮ್ಮದ್ ರಫೀ ಪಾಷ ಮತ್ತು ಗುಲ್ವಾಡಿ ವೆಂಕಟರಾವ್ ಪ್ರಶಸ್ತಿಗೆ ವಿಮರ್ಶಕಿ ಡಾ. ಧರಣಿದೇವಿ ಮಾಲಗತ್ತಿ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿದರು. 13 ರಂದು ಉಡುಪಿಯಲ್ಲಿ ಈ ಪ್ರಶಸ್ತಿಗಳ‍ನ್ನು ಪ್ರದಾನ ಮಾಡಲಾಗುತ್ತದೆ, ಈ ಪ್ರಶಸ್ತಿಗಳು 10 ಸಾವಿರ ರು. ನಗದು ಮತ್ತು ಸ್ಮರಣ ಫಲಕಗಳನ್ನು ಒಳಗೊಂಡಿರುತ್ತದೆ ಎಂದರು.

1007118969


ಮೊಹಮ್ಮದ್‌ ರಫೀ ಪಾಷ ಕನ್ನಡ ಸಾಹಿತ್ಯ, ಕಲೆ, ಸಂಸ್ಕೃತಿ ವಿಚಾರಗಳ ಬಗ್ಗೆ ಅಪಾರ ಕಳಕಳಿ ಹೊಂದಿರುವ ಹಿರಿಯ ಸಾಹಿತಿ. ಮೊಹಮ್ಮದ ರಫೀ ಪಾಷ ಪ್ರಸ್ತುತ ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಉಪ ಆಯುಕ್ತರಾಗಿದ್ದಾರೆ. ಭಾರತೀಯ ನಾಗರೀಕ ಸೇವೆ ಮತ್ತು ಕರ್ನಾಟಕ ಆಡಳಿತ ಸೇವೆಗಳಿಗೆ ಸೇರಬಯಸುವ ಗ್ರಾಮೀಣ ಅದರಲ್ಲೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ 12ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದು ಸಲಹೆ ಮಾರ್ಗದರ್ಶನ ನೀಡುತ್ತಿದ್ದಾರೆ. 2010 ರಲ್ಲಿ ಕರ್ನಾಟಕ ಆಡಳಿತ ಸೇವೆಯ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೊದಲು ದೆಹಲಿ, ಜಮ್ಮು ಮತ್ತು ಕಾಶ್ಮೀರ, ಹೈದ್ರಾಬಾದ್ ಇನ್ನಿತರ ರಾಜ್ಯಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನೂರಾರು ವಿದ್ಯಾರ್ಥಿಗಳ ಬದುಕಿನಲ್ಲಿ ಭರವಸೆ ಮೂಡಿಸಿದ್ದಾರೆ. ಅಮೇರಿಕಾದ ಅಕ್ಕ, ಇಂಗ್ಲೆಂಡಿನ ವಿಶ್ವ ಒಕ್ಕಲಿಗರ ವೇದಿಕೆ, ಆಸ್ಟ್ರೇಲಿಯಾದ ಕನ್ನಡ ಕೂಟ, ದುಬೈಯ ಅಂತರರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನ, ದೆಹಲಿ ಕರ್ನಾಟಕ ಸಂಘದ ಪ್ರಶಸ್ತಿ ಗೌರವಗಳಿಗೆ ಪಾತ್ರರಾಗಿದ್ದಾರೆ.

ಡಾ. ಧರಣಿದೇವಿ ಮಾಲಗತ್ತಿ:
ಕವಿ, ಸಂಶೋಧಕಿ, ವಿಮರ್ಶಕಿಯಾಗಿ ಮಹಿಳಾಪರ ಚಿಂತನೆಗಳ ಮೂಲಕ ಸಹಸ್ರಾರು ಓದುಗರನ್ನ ಹೊಂದಿರುವ ಡಾ. ಧರಣಿದೇವಿ ಮಾಲಗತ್ತಿ ಮೂಲತಃ ಬಂಟ್ವಾಳದವರು. ಅಲ್ಲಿಯೇ ಬಿಕಾಂ ಪದವಿಯ ನಂತರ ಮೈಸೂರು ವಿ.ವಿ.ಯಿಂದ ನಿರ್ವಹಣಾಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದು, ಮಂಗಳೂರು, ಮೈಸೂರು ವಿ.ವಿ.ಗಳಲ್ಲಿ ಉಪನ್ಯಾಸಕರಾಗಿ ಒಂದು ದಶಕ ಕರ್ತವ್ಯ ನಿರ್ವಹಿಸಿದ್ದಾರೆ.

ಮುಂದೆ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ದೇಜಗೌ ಸಾಹಿತ್ಯ ಪ್ರಶಸ್ತಿ, ಧಾರವಾಡದ ದತ್ತಿ ಬಹುಮಾನ, ಗೋರೂರು ಪ್ರಶಸ್ತಿ, ಮಾತೋಶ್ರೀ ರತ್ನಮ್ಮ ಹೆಗಡೆ ಪ್ರಶಸ್ತಿ, ಎಚ್.ನರಸಿಂಹಯ್ಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಅವರಿಗೆ ಸಂದಿವೆ.
ಸುದ್ದಿಗೋಷ್ಠಿಯಲ್ಲಿ ಕಸಾಪದ ಸುಬ್ರಹ್ಮಣ್ಯ ಶೆಟ್ಟಿ, ನರಸಿಂಹಮೂರ್ತಿ ಮತ್ತು ಗುಲ್ವಾಡಿ ಟಾಕೀಸ್‌ನ ಯಾಕೂಬ್ ಖಾದರ್ ಗುಲ್ವಾಡಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X