ಮದ್ದೂರು ಪ್ರಕರಣ | ನಾವು ಮಂಡ್ಯ ಜಿಲ್ಲೆಯ ಜನತೆ ಪರ ನಿಲ್ಲುತ್ತೇವೆ: ಸಚಿವ ಎನ್‌ ಚಲುವರಾಯಸ್ವಾಮಿ

Date:

Advertisements

ಮದ್ದೂರು ನಗರದಲ್ಲಿ ಗಣಪತಿ ಮೆರವಣಿಗೆ ವೇಳೆ ನಡೆದಿರುವ ಕಲ್ಲುತೂರಾಟದ ಘಟನೆ ಗಂಭೀರವಾದ ವಿಷಯ. ಮೆರವಣಿಗೆ ವೇಳೆ ಲೈಟ್ ಆಫ್ ಮಾಡಿರುವ ಮಾಹಿತಿ ಇದೆ. ಇದು ‘ಪೂರ್ವಯೋಜಿತ ಕೃತ್ಯ’ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇದರ ಹಿಂದೆ ಯಾರಿದ್ದಾರೆ ಎಲ್ಲವೂ ಕೂಡ ಗೊತ್ತಾಗಬೇಕು. ಬಂಧಿತರಲ್ಲಿ ಇಬ್ಬರು ಹೊರ ಜಿಲ್ಲೆಯವರೆಂದು ತಿಳಿದುಬಂದಿದೆ. ನಾವು ಒಂದು ಸಮುದಾಯದ ಪರ ನಿಲ್ಲುವ ಪ್ರಶ್ನೆಯೇ ಇಲ್ಲ. ಮಂಡ್ಯ ಜನತೆಯ ಪರ ನಿಲ್ಲುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉನ್ನತ ಮಟ್ಟದಲ್ಲಿ ಎಲ್ಲ ರೀತಿಯಲ್ಲೂ ಪೊಲೀಸ್ ಇಲಾಖೆಯಿಂದ ತನಿಖೆ ನಡೆಸಲು ಐಜಿ ಹಾಗೂ 8 ಮಂದಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಂಪೂರ್ಣ ವರದಿ ಸಿದ್ದಪಡಿಸಿ ಶೀಘ್ರದಲ್ಲೇ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುವುದು” ಎಂದರು.

ಎನ್‌ ಚಲುವರಾಯಸ್ವಾಮಿ 1

“ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 21 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನಾವು ಮಂಡ್ಯ ಜಿಲ್ಲೆಯ ಜನತೆಯ ಪರ ನಿಲ್ಲುತ್ತೇವೆ. ಈ ವಿಷಯದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡುವುದಿಲ್ಲ. ಯಾರನ್ನೂ ಓಲೈಸುವುದಿಲ್ಲ. ಎಲ್ಲ ರೀತಿಯ ಆಯಾಮದಲ್ಲೂ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು” ಎಂದರು.

ʼಕೃತ್ಯಕ್ಕೆ ಪ್ರತಾಪ ಸಿಂಹರಂಥ ಪ್ರಚೋದನಾಕಾರಿ ಮನಸ್ಥಿತಿಗಳೇ ಕಾರಣʼ: ಆರೋಪ

“ಇಂತಹ ಘಟನೆ ನಡೆಯಲು ಪ್ರತಾಪ ಸಿಂಹ ಅವರಂಥ ಪ್ರಚೋದನಾಕಾರಿ ಮನಸ್ಥಿತಿಗಳೇ ಕಾರಣ. ಈಗಾಗಲೇ ಬಿಜೆಪಿ ಅವರನ್ನು ದೂರ ಇಟ್ಟಿದೆ. ಅದಕ್ಕಾಗಿ ಏನೇನೋ ಪ್ರಚೋದನೆ ಮಾಡ್ತಾರೆ. ನಾನು ತುಂಬಾ ರಾಜಕೀಯ ನೋಡಿಕೊಂಡು ಬಂದಿದ್ದೇನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಸಹಿತ ಹಲವು ಮುಖಂಡರು ಪೊಲೀಸ್‌ ವಶಕ್ಕೆ

“ಕುಮಾರಸ್ವಾಮಿಯವರು ‘ಕಾಂಗ್ರೆಸ್ ಅವನತಿʼ ಶುರು ಅಂತಾರೆ. ಮೊದಲು ಜೆಡಿಎಸ್‌ ಅವನತಿಯಾಗುವುದನ್ನು ತಡೆಯಲಿ. ಇದಕ್ಕೆ ರಾಜಕೀಯ ಬೆರೆಸಬೇಡಿ. ರಾಜಕಾರಣ ಹೋರಾಟ ಬೇರೆ ಕಡೆ ಮಾಡೋಣ. ಧರ್ಮದ ಹೆಸರಿನಲ್ಲಿ ನಮ್ಮ ಸರ್ಕಾರ ರಾಜಕೀಯ ಮಾಡುವುದಿಲ್ಲ. ಧಾರ್ಮಿಕ ಸಂಘಟನೆಗಳು ಯಾವುದೇ ರಾಜಕೀಯ ಪ್ರಚೋದನೆಗೆ ಒಳಗಾಗಬಾರದು” ಎಂದು ಮನವಿ ಮಾಡಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಕುಮಾರ, ಜಿ.ಪಂ ಸಿಇಒ ನಂದಿನಿ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

Download Eedina App Android / iOS

X