ಕೋಲಾರ: ಮತಗಳ್ಳತನದ ಮೂಲಕವೇ ಕೇಂದ್ರದಲ್ಲಿ ಬಿಜೆಪಿ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿದಿದೆ ಅವರು ಅಧಿಕಾರದಲ್ಲಿ ಇರಲು ಯಾವುದೇ ನೈತಿಕತೆ ಇಲ್ಲ ಎನ್‌ಡಿಎ ಸರ್ಕಾರದ ವಿರುದ್ದ ಪ್ರತಿ ತಾಲೂಕು ವಾರ್ಡ್ ಗಳಲ್ಲಿ ಜನಜಾಗೃತಿ ಮೂಡಿಸಬೇಕು ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಬಾನು ಚಿಬ್ ತಿಳಿಸಿದರು
ನಗರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತಗಳ್ಳತನ ವಿರುದ್ದ ಜನಜಾಗೃತಿ ಸಭೆ ಹಾಗೂ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರವು ಮತಗಳ್ಳತನದ ಮೂಲಕ ಅಧಿಕಾರ ಹಿಡಿದಿರುವುದು ಇದೀಗ ಸಾಬೀತಾಗುತ್ತಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನವನ್ನು ಬಹಿರಂಗಪಡಿಸಿದ ಬಳಿಕ ಒಂದೊಂದೇ ಮತಗಳ್ಳತನ ಪ್ರಕರಣಗಳು ಬಯಲಿಗೆ ಬರುತ್ತಿವೆ ಯುವ ಕಾಂಗ್ರೆಸ್ ನೇತೃತ್ವದಲ್ಲಿ ತಮ್ಮ ತಾಲೂಕು ಮತ್ತು ವಾರ್ಡ್ ಸಭೆಗಳಲ್ಲಿ ಪರಿಶೀಲನೆ ಮಾಡಬೇಕು ಎಂದರು.
ಚುನಾವಣಾ ಆಯೋಗದ ನಿಯಮಗಳನ್ನು ಬದಲಿಸುವ ಮೂಲಕ ಮತಗಳ್ಳತನವನ್ನು ಬಿಜೆಪಿ ಆರಂಭಿಸಿದೆ ರಾಜ್ಯದಲ್ಲಿ ಸಹ ಮತಗಳನ್ನು ಕಳ್ಳತನ ಮಾಡಲಾಗಿದೆ. ಇನ್ನು ಕೆಲವೆಡೆ ಬದುಕಿದ್ದವರನ್ನು ಮೃತಪಟ್ಟಿದ್ದಾರೆ ಎಂದು ಹೇಳಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ರಾಹುಲ್ ಗಾಂಧಿ ಅವರು ಆರೋಪ ಮಾಡಿದರೆ ಚುನಾವಣಾ ಆಯೋಗದ ಅದಕ್ಕೆ ಉತ್ತರ ನೀಡಬೇಕಾಗಿತ್ತು. ಆದರೆ ಬಿಜೆಪಿ ನಾಯಕರು ಉತ್ತರ ನೀಡುತ್ತಿದ್ದಾರೆ ಇದನ್ನು ನೋಡಿದರೆ ಬಿಜೆಪಿ ನಿಜವಾಗಿಯೂ ಮತಗಳ್ಳತನದಲ್ಲಿ ಭಾಗಿಯಾಗಿದ್ದು ಎಂಬುದನ್ನು ತೋರಿಸುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ ದೇಶದ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಯಲಿಗೆ ತಂದಿರುವ ವೋಟ್ ಚೋರಿ ಬಗ್ಗೆ ಅರಿವು ಮೂಡಿಸಬೇಕು ಹಾಗೂ ಯಾವ ಬೂತ್ ನಲ್ಲಿ ಮಹದೇವಪುರ ಕ್ಷೇತ್ರದಲ್ಲಿ ಆಗಿದೆ ಎಂದು ಗಮನ ಇಡಬೇಕು, ರಾಹುಲ್ ಗಾಂಧಿ ಬಿಹಾರದಲ್ಲಿ ಮತ ಕಳ್ಳತನ ವಿರುದ್ದ ಯಾತ್ರೆಗೆ ಜನರು ಬೆಂಬಲ ನೀಡಿದ್ದಾರೆ ಇವತ್ತು ದೇಶಾದ್ಯಂತ ಇದರ ಬಗ್ಗೆ ಚರ್ಚೆ ಆಗುತ್ತಿದೆ ಅದರಂತೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವೋಟ್ ಚೋರಿ ಅರಿವು ಮೂಡಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಮಾತನಾಡಿ ಕೇಂದ್ರದ ಮೋದಿ ನೇತೃತ್ವದಲ್ಲಿ ಸರ್ಕಾರ ಮೋಸದಿಂದ ಅಧಿಕಾರಕ್ಕೆ ಬಂದಿದೆ ದೇಶದಲ್ಲೇ ಮೊದಲ ಬಾರಿಗೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ವೋಟ್ ಚೋರಿ ಕಾರ್ಯಕ್ರಮ ಕೋಲಾರದಿಂದಲೇ ಪ್ರಾರಂಭ ಮಾಡಿದ್ದೇವೆ ಮುಂದೆ ರಾಜ್ಯಾದ್ಯಂತ ನಡೆಸಲಾಗುತ್ತದೆ ಎಂದರು
ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸೈಯದ್ ಆಫ್ರೀದ್ ಮಾತನಾಡಿ ಪ್ರಜಾಪ್ರಭುತ್ವಕ್ಕೆ ಆತಂಕ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಡೆಯಿದೆ ಸಂವಿಧಾನವನ್ನು ಉಳಿಸಿ ಎಂದು ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿರುವುದು ದುರಂತದ ಸಂಗತಿಯಾಗಿದೆ ಬಿಜೆಪಿ ಹಿಂಬಾಗಿಲಿನಿಂದ ಅಧಿಕಾರ ಪಡೆಯುವುದು ಅವರ ಉದ್ದೇಶವಾಗಿದೆ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದರು. ಸಿಬಿಐ, ಇಡಿ ಹೀಗೆ ಹಲವು ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದ್ದರು. ಇದೀಗ ಚುನಾವಣಾ ಆಯೋಗವನ್ನೇ ದುರುಪಯೋಗ ಮಾಡಿಕೊಂಡಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಮಾಡಿರುವ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿದ್ದೀರಾ..? https://eedina.com/karnataka/kolar-2-50-crore-grant-for-construction-of-guru-bhavan-construction-to-be-completed-by-2027-1019/2025-09-07/ಕೋಲಾರ | ಗುರುಭವನ ನಿರ್ಮಾಣಕ್ಕೆ 2.50 ಕೋಟಿ ಅನುದಾನ; 2027ಕ್ಕೆ ಕಟ್ಟಡ ಪೂರ್ಣಗೊಳಿಸುವ ನಿರ್ಧಾರ
ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ, ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ಭವ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಭರತ್ ರಾಯ್, ಯುವ ಮುಖಂಡ ನವೀನ್, ಅಬ್ದುಲ್ ಖಯ್ಯುಂ, ಅನ್ವರ್, ನೂರ್, ಜಿಲ್ಲಾ ಉಪಾಧ್ಯಕ್ಷ ವಾಸುರೆಡ್ಡಿ, ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು, ಆಸೀಫ್, ಸುಹೈಲ್, ಅರ್ಬಾಜ್, ನಗರಸಭೆ ಸದಸ್ಯರು, ಕೋಲಾರ ಕಾಂಗ್ರೆಸ್ ಮುಖಂಡರು ಮುಂತಾದವರು ಉಪಸ್ಥಿತರಿದ್ದರು