ಮಾಜಿ ಶಾಸಕ ಗುಂಡಪ್ಪ ವಕೀಲ್ ಡಿಜಿಟಲ್ ಅರೆಸ್ಟ್‌, 30 ಲಕ್ಷ ರೂ. ದೋಚಿದ ಆನ್‌ಲೈನ್ ವಂಚಕರು

Date:

Advertisements

ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರು ಡಿಜಿಟಲ್ ಅರೆಸ್ಟ್‌ಗೆ 30 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಬಿಐ, ಇ.ಡಿ ಹಾಗೂ ಜಡ್ಜ್ ಹೆಸರಿನಲ್ಲಿ ವಂಚಕರು ಮಾಜಿ ಶಾಸಕರಿಂದ ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡಿದ್ದಾರೆ.

ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಆನ್‌ಲೈನ್ ವಂಚಕರು ‘ನೀವು ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್‌ನಲ್ಲಿ ಭಾಗಿಯಾಗಿದ್ದೀರಿ. ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿ’ ಎಂದು ಹೆದರಿಸಿದ್ದರು.

ಆ.13ರಂದು ಸಿಬಿಐ ಡಿಸಿಪಿ ಎಂದು ಮತ್ತೋರ್ವ ಕರೆ ಮಾಡಿ, ‘ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ, ಕಾಲ್ ಕಟ್ ಮಾಡಬೇಡಿ’ ಎಂದು ಭಯ ಪಡಿಸಿದ್ದ. ಬಳಿಕ ಆನ್‌ಲೈನ್‌ನಲ್ಲಿ ಫೇಕ್ ಜಡ್ಜ್ ಮುಂದೆ ಹಾಜರು ಪಡಿಸಿದ್ದ ಖದೀಮರು ಕೋರ್ಟ್ ಹಾಲ್ ರೀತಿ ಸೆಟಪ್ ಮಾಡಿ ನಂಬಿಕೆ ಹುಟ್ಟಿಸಿದ್ದರು.

‘ನಮ್ಮದು ತಪ್ಪಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಿ’ ಎಂದು ಮೊದಲು 10 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದರು. ಬಳಿಕ ಪ್ರಾಪರ್ಟಿ ತನಿಖೆ ಮಾಡಬೇಕೆಂದು 20 ಲಕ್ಷ ರೂ. ಡೆಪಾಸಿಟ್ ಮಾಡಿಸಿಕೊಂಡಿದ್ದರು. ಹೀಗೆ ಆನ್‌ಲೈನ್‌ ವಂಚಕರ ಮಾತು ನಂಬಿ ಹಂತ-ಹಂತವಾಗಿ 30.99 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X