ಧಾರವಾಡ | ಬೆಳೆ ಹಾನಿ ಪರಿಹಾರಕ್ಕೆ ಕ್ರಮವಹಿಸಲು ಸಚಿವ ಸಂತೋಷ್‌ ಲಾಡ್‌ ಸೂಚನೆ

Date:

Advertisements

ಧಾರವಾಡ ಜಿಲ್ಲೆಯಾದ್ಯಂತ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಸೇರಿ ಸುಮಾರು 93,496.98 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮಿತಿ ಮೂಲಕ ಸಮೀಕ್ಷೆ ಮಾಡಿ, ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ದತ್ತಾಂಶಗಳನ್ನು ದಾಖಲಿಸಲು ಪರಿಹಾರ ಬಿಡುಗಡೆಗೆ ತಕ್ಷಣ ಕ್ರಮವಹಿಸಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿಗಳೊಂದಿಗೆ ಜರುಗಿದ ಅತೀವೃಷ್ಠಿ ಹಾನಿ ಕುರಿತ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ತೆಗೆದುಕೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆ ಮಾಡಿ ಮಾತನಾಡಿದ ಅವರು, “ರಾಜ್ಯದಲ್ಲಿಯೇ ಮೊದಲನೆಯದಾಗಿ ಧಾರವಾಡ ಜಿಲ್ಲಾಡಳಿತವು ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕೃಷಿ ಹಾಗೂ ತೋಟಗಾರಿಕಾ ಬೆಳೆಹಾನಿಯನ್ನು ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳ ತಂಡದಿಂದ ಜಂಟಿ ಸಮೀಕ್ಷೆಯನ್ನು ಪೂರೈಸಿದೆ. ಅಲ್ಲದೇ ಸಮೀಕ್ಷೆಯ ಅಂತಿಮ ವರದಿಯನ್ನು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆಯೊಂದಿಗೆ ಧಾರವಾಡ ಜಿಲ್ಲಾಡಳಿತವು ಸಲ್ಲಿಸಿದೆ. ಮಾನ್ಯ ಮುಖ್ಯಮಂತ್ರಿಗಳು ಈ ಕುರಿತು ಪರಿಶೀಲಿಸಿ, ರೈತರಿಗೆ ಅನುಕೂಲವಾಗುವಂತೆ ತಕ್ಷಣ ಪರಿಹಾರ ಬಿಡುಗಡೆ ಮಾಡಲು ಸೂಕ್ತ ಕ್ರಮವಹಿಬೇಕು” ಎಂದು ಮನವಿ ಮಾಡಿದರು.

ಧಾರವಾಡ ಜಿಲ್ಲಾಧಿಕಾರಿಗಳು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಜಿಲ್ಲೆಯಲ್ಲಿ ಆಗಿರುವ ಮೂಲಭೂತ ಸೌಕರ್ಯಗಳ ಹಾನಿ ಬಗ್ಗೆ ಪರಿಶೀಲಿಸಿ, ದುರಸ್ತಿಗೆ ಆದೇಶಿಸಿದ್ದಾರೆ. ಈ ಕುರಿತು ಅನುದಾನ ಬಿಡುಗಡೆ ಮಾಡಲು ಸಚಿವರು ಮುಖ್ಯಮಂತ್ರಿಗಳಲ್ಲಿ ಕೋರಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, “ಜಿಲ್ಲೆಯಲ್ಲಿ ಅತೀವೃಷ್ಠಿಯಿಂದ ಆಗಿರುವ ಬೆಳೆ ಹಾನಿ ಸಮೀಕ್ಷೆಯನ್ನು ಪೂರ್ಣಗೊಳಿಸಿ, ಅಂತಿಮ ವರದಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಬೆಳೆ ಹಾನಿ ಮಾಹಿತಿ ದಾಖಲಿಸಲು ವೆಬ್‍ಸೈಟ್ ಓಪನ್ ಮಾಡಿದರೆ, ದತ್ತಾಂಶ ದಾಖಲಿಸುವದನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು. ತಕ್ಷಣಕ್ಕೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳ ಪಿಡಿ ಖಾತೆ ಹಾಗೂ ಜಿಲ್ಲೆಯ ಎಲ್ಲ ತಾಲೂಕಿನ ತಹಶೀಲ್ದಾರರ ಪಿಡಿ ಖಾತೆಯಲ್ಲಿ 2713.05 ಲಕ್ಷ ರೂ.ಗಳ ಅನುದಾನ ಲಭ್ಯವಿದೆ. ಜನ-ಜಾನುವಾರ ಹಾನಿ: 2025-26 ನೇ ಸಾಲಿನ ಏಪ್ರಿಲ್ 1 ರಿಂದ ಸೆಪ್ಟೆಂಬರ್ 6 ರವರೆಗೆ ಮಾನವ ಹಾನಿಯು ಧಾರವಾಡ ತಾಲೂಕಿನಲ್ಲಿ 1, ಕುಂದುಗೋಳ-2, ಹುಬ್ಬಳ್ಳಿ ನಗರ-1, ಒಟ್ಟು 4 ಮಾನವ ಹಾನಿಯಾಗಿದ್ದು, ಒಟ್ಟು 20 ಲಕ್ಷ ಪರಿಹಾರ ಹಣ ನೀಡಲಾಗಿದೆ”

“ಹುಬ್ಬಳ್ಳಿ ತಾಲೂಕಿನಲ್ಲಿ-1, ಕಲಘಟಗಿ-2, ಅಣ್ಣಿಗೇರಿ-1, ಒಟ್ಟು 4 ದೊಡ್ಡ ಜಾನುವಾರು ಹಾನಿಯಾಗಿದ್ದು, 1.50 ಲಕ್ಷ ಪರಿಹಾರ ನೀಡಲಾಗಿದೆ. ಹುಬ್ಬಳ್ಳಿ ತಾಲೂಕಿನಲ್ಲಿ 2 ಸಣ್ಣ ಜಾನುವಾರು ಹಾನಿಯಾಗಿದ್ದು, 8 ಸಾವಿರ ಪರಿಹಾರ ನೀಡಲಾಗಿದೆ. ಒಟ್ಟಾರೆಯಾಗಿ ದೊಡ್ಡ ಜಾನುವಾರು ಮತ್ತು ಸಣ್ಣ ಜಾನುವಾರು ಹಾನಿಗೆ 1.58 ಲಕ್ಷ ಪರಿಹಾರ ನೀಡಲಾಗಿದೆ” ಎಂದು ವರದಿ ನೀಡಿದರು.

“ಏಪ್ರಿಲ್ 01, 2025 ರಿಂದ ಅಗಸ್ಟ್ 29, 2025 ರವರೆಗೆ ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಆಗಿರುವ ಮನೆ ಹಾನಿಗಳ ಪೈಕಿ 182 ಮನೆಗಳ ವಿವರಗಳನ್ನು ಆರ್‍ಜಿಆರ್‍ಎಚ್‍ಸಿಎಲ್ (ಖಉಖಊಅಐ) ತಂತ್ರಾಂಶದಲ್ಲಿ ದಾಖಲಿಸಲಾಗಿದೆ. ಇವುಗಳ ಪೈಕಿ ಹುಬ್ಬಳ್ಳಿ-4, ಕಲಘಟಗಿ-3, ಕುಂದಗೋಳ-1, ನವಲಗುಂದ-23, ಅಣ್ಣಿಗೇರಿ-1 ಒಟ್ಟು 32 ಮನೆಗಳು ಶೇ. 76 ಕ್ಕಿಂತ ಹೆಚ್ಚು ಹಾನಿಯಾಗಿದ್ದು, 38.40 ಲಕ್ಷ ಪರಿಹಾರ ನೀಡಲಾಗಿದೆ. ಧಾರವಾಡ-7, ಹುಬ್ಬಳ್ಳಿ-4, ಕಲಘಟಗಿ-7, ಕುಂದಗೋಳ-2, ನವಲಗುಂದ-25, ಹುಬ್ಬಳ್ಳಿ ನಗರ-4 ಒಟ್ಟು 49 ಮನೆಗಳು ಶೇ. 51 ರಿಂದ ಶೇ.75 ರಷ್ಟು ಹಾನಿಯಾಗಿದ್ದು, 24.50 ಲಕ್ಷ ಪರಿಹಾರ ನೀಡಲಾಗಿದೆ. ಧಾರವಾಡ-5, ಹುಬ್ಬಳ್ಳಿ-14, ಕಲಘಟಗಿ-5, ಕುಂದಗೋಳ-1, ನವಲಗುಂದ-39, ಹುಬ್ಬಳ್ಳಿ ನಗರ-11, ಒಟ್ಟು 75 ಮನೆಗಳು ಶೇ. 21 ರಿಂದ ಶೇ. 50 ರಷ್ಟು ಹಾನಿಯಾಗಿದ್ದು, 22.50 ಲಕ್ಷ ಪರಿಹಾರ ನೀಡಲಾಗಿದೆ. ಧಾರವಾಡ-1, ಹುಬ್ಬಳ್ಳಿ-3, ಕಲಘಟಗಿ-15, ನವಲಗುಂದ-2, ಹುಬ್ಬಳ್ಳಿ ನಗರ-5, ಒಟ್ಟು 26 ಮನೆಗಳು ಶೇ. 15 ರಿಂದ ಶೇ. 20 ರಷ್ಟು ಹಾನಿಯಾಗಿದ್ದು, 1.69 ಲಕ್ಷ ಪರಿಹಾರ ನೀಡಲಾಗಿದೆ. ಒಟ್ಟಾರೆಯಾಗಿ 182 ಮನೆಗಳಿಗೆ 87.09 ಲಕ್ಷ ಪರಿಹಾರವನ್ನು ಈಗಾಗಲೇ ನೀಡಲಾಗಿದೆ” ಎಂದು ಮಾಹಿತಿ ನೀಡಿದರು.

“ಆಗಸ್ಟ್ ತಿಂಗಳಲ್ಲಿ ಭಾರಿ ಮಳೆಯಿಂದ ಧಾರವಾಡ ತಾಲೂಕಿನಲ್ಲಿ 8,968.60 ಹೆಕ್ಟೆರ್ ಪ್ರದೇಶದಲ್ಲಿ ಹೆಸರು ಬೆಳೆ, 7,941.61 ಹೆಕ್ಟೆರ್ ಪ್ರದೇಶದ ಉದ್ದು ಬೆಳೆ ಹಾನಿಯಾಗಿದ್ದು, ಒಟ್ಟು 16,910.21 ಹೆಕ್ಟೆರ್ ಪ್ರದೇಶದಲ್ಲಿ ಹೆಸರು ಮತ್ತು ಉದ್ದು ಬೆಳೆ ಹಾನಿಯಾಗಿದೆ. ಹುಬ್ಬಳ್ಳಿ ತಾಲೂಕಿನಲ್ಲಿ 17,805.79 ಹೆಕ್ಟೆರ್ ಪ್ರದೇಶದಲ್ಲಿ ಹೆಸರು ಬೆಳೆ, 192.53 ಹೆಕ್ಟೆರ್ ಪ್ರದೇಶದಲ್ಲಿ ಉದ್ದು ಬೆಳೆ ಹಾನಿಯಾಗಿದ್ದು, ಒಟ್ಟು 17,998.32 ಹೆಕ್ಟೆರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಯಾಗಿದೆ. ಹುಬ್ಬಳ್ಳಿ ನಗರ ತಾಲೂಕಿನಲ್ಲಿ 1,104.39 ಹೆಕ್ಟೆರ್ ಪ್ರದೇಶದಲ್ಲಿ ಹೆಸರು ಬೆಳೆ, 198.90 ಹೆಕ್ಟೆರ್ ಪ್ರದೇಶದಲ್ಲಿ ಉದ್ದು ಬೆಳೆ ಹಾನಿಯಾಗಿದ್ದು, ಒಟ್ಟು 1,303.29 ಹೆಕ್ಟೆರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಯಾಗಿದೆ. ನವಲಗುಂದ ತಾಲೂಕಿನಲ್ಲಿ 23,584.42 ಹೆಕ್ಟೆರ್ ಪ್ರದೇಶದಲ್ಲಿ ಹೆಸರು ಬೆಳೆ, 409.56 ಹೆಕ್ಟೆರ್ ಪ್ರದೇಶದಲ್ಲಿ ಉದ್ದು ಬೆಳೆ ಹಾನಿಯಾಗಿದ್ದು, ಒಟ್ಟು 23,993.98 ಹೆಕ್ಟೆರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಯಾಗಿದೆ. ಅಣ್ಣಿಗೇರಿ ತಾಲೂಕಿನಲ್ಲಿ 15,135.82 ಹೆಕ್ಟೆರ್ ಪ್ರದೇಶದಲ್ಲಿ ಹೆಸರು ಬೆಳೆ, 189.05 ಹೆಕ್ಟೆರ್ ಪ್ರದೇಶದಲ್ಲಿ ಉದ್ದು ಬೆಳೆ ಹಾನಿಯಾಗಿದ್ದು, ಒಟ್ಟು 15,324.87 ಹೆಕ್ಟೆರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಯಾಗಿದೆ. ಕುಂದಗೋಳ ತಾಲೂಕಿನಲ್ಲಿ 11,785.92 ಹೆಕ್ಟೆರ್ ಪ್ರದೇಶದಲ್ಲಿ ಹೆಸರು ಬೆಳೆ, 1,654.31 ಹೆಕ್ಟೆರ್ ಪ್ರದೇಶದಲ್ಲಿ ಉದ್ದು ಬೆಳೆ ಹಾನಿಯಾಗಿದ್ದು, ಒಟ್ಟು 13,440.23 ಹೆಕ್ಟೆರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಯಾಗಿದೆ. ಒಟ್ಟು ಧಾರವಾಡ ಜಿಲ್ಲೆಯಲ್ಲಿ 78,384.94 ಹೆಕ್ಟೆರ್ ಪ್ರದೇಶದ ಹೆಸರು ಬೆಳೆ ಹಾಗೂ 10,585.96 ಹೆಕ್ಟೆರ್ ಪ್ರದೇಶದ ಉದ್ದು ಬೆಳೆಯು ಹಾನಿಯಾಗಿದ್ದು, ಒಟ್ಟಾರೆಯಾಗಿ 88,970.90 ಹೆಕ್ಟೆರ್ ಪ್ರದೇಶದಲ್ಲಿ ಕೃಷಿ ಬೆಳೆಯು ಹಾನಿಯಾಗಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಧಾರವಾಡ | ಗಣೇಶ ವಿಸರ್ಜನೆ ವೇಳೆ ಡಿಜೆ ವಿಚಾರಕ್ಕೆ ಗುಂಪು ಜಗಳ

“ಆಗಸ್ಟ್ ತಿಂಗಳಲ್ಲಿ ಭಾರಿ ಮಳೆಯಿಂದ ಧಾರವಾಡ ತಾಲೂಕಿನಲ್ಲಿ 895 ಹೆಕ್ಟೆರ್ ಪ್ರದೇಶದಲ್ಲಿ ಈರುಳ್ಳಿ ಬೆಳೆ ಹಾನಿಯಾಗಿದೆ. ನವಲಗುಂದ ತಾಲೂಕಿನಲ್ಲಿ 324.83 ಹೆಕ್ಟೆರ್ ಪ್ರದೇಶದಲ್ಲಿ ಒಣಮೆಣಸಿನಕಾಯಿ, 1,998.54 ಹೆಕ್ಟೆರ್ ಪ್ರದೇಶದಲ್ಲಿ ಈರುಳ್ಳಿ ಬೆಳೆ ಸೇರಿ ಒಟ್ಟು 2,323.37 ಹೆಕ್ಟೆರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಅಣ್ಣಿಗೇರಿ ತಾಲೂಕಿನಲ್ಲಿ 580 ಹೆಕ್ಟೆರ್ ಪ್ರದೇಶದಲ್ಲಿ ಒಣಮೆಣಸಿನಕಾಯಿ, 483 ಹೆಕ್ಟೆರ್ ಪ್ರದೇಶದಲ್ಲಿ ಈರುಳ್ಳಿ ಬೆಳೆ, ಒಟ್ಟು 1,063 ಹೆಕ್ಟೆರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕುಂದಗೋಳ ತಾಲೂಕಿನಲ್ಲಿ 244.71 ಹೆಕ್ಟೆರ್ ಪ್ರದೇಶದಲ್ಲಿ ಬೆಳ್ಳುಳ್ಳಿ ಬೆಳೆ ಹಾನಿಯಾಗಿದೆ. ಒಟ್ಟು ಧಾರವಾಡ ಜಿಲ್ಲೆಯಲ್ಲಿ 904.83 ಹೆಕ್ಟೆರ್ ಪ್ರದೇಶದ ಒಣಮೆಣಸಿನಕಾಯಿ, 3,376.54 ಹೆಕ್ಟೆರ್ ಪ್ರದೇಶದ ಈರುಳ್ಳಿ ಹಾಗೂ 244.71 ಹೆಕ್ಟೆರ್ ಪ್ರದೇಶದ ಬೆಳ್ಳುಳ್ಳಿ ಬೆಳೆಯು ಹಾನಿಯಾಗಿದ್ದು, ಒಟ್ಟಾರೆಯಾಗಿ 4,526.08 ಹೆಕ್ಟೆರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ” ಎಂದು ತಿಳಿಸಿದರು.

ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಸುರಿದ ಭಾರಿ ಮತ್ತು ನಿರಂತರ ಮಳೆಯಿಂದಾಗಿ ರಸ್ತೆಗಳು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳು ಹಾನಿಯಾಗಿವೆ. ಅವುಗಳಲ್ಲಿ ರಾಜ್ಯ ಹೆದ್ದಾರಿ ರಸ್ತೆಗಳು-5.70 ಕಿ.ಮೀ., ಜಿಲ್ಲಾ ಪ್ರಮುಖ ರಸ್ತೆಗಳು-20.38 ಕಿ.ಮೀ., ಗ್ರಾಮೀಣ ರಸ್ತೆಗಳು 340.09 ಕಿ.ಮೀ., ಸೇತುವೆ ಮತ್ತು ಸಿಡಿಗಳು-102, ಶಾಲೆಗಳು ಮತ್ತು ಕೊಠಡಿಗಳು-70, ಅಂಗನವಾಡಿ ಕೇಂದ್ರಗಳು–49, ವಿದ್ಯುತ್ ಕಂಬಳು-1,241 ಹಾಗೂ ವಿದ್ಯುತ್ ಪರಿವರ್ತಕ(ಟಿಸಿ)ಗಳು-80 ಹಾನಿಯಾಗಿವೆ ಎಂದು ಸಂಬಂಧಿಸಿದ ಇಲಾಖೆಗಳಿಂದ ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ” ಎಂದರು.

ಮುಖ್ಯಮಂತ್ರಿಗಳ ವಿಡಿಯೋ ಸಂವಾದ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ನಗಾರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಅಜೀಜ್ ದೇಸಾಯಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಾಶಿನಾಥ ಭದ್ರಣ್ಣನವರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ವಿಜಯಕುಮಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಜಗದೀಶ ಪಾಟೀಲ ಹಾಗೂ ಎಲ್ಲ ತಾಲೂಕಿನ ತಹಶೀಲ್ದಾರರು, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ, ಪಂಚಾಯತ ರಾಜ್ ಇಂಜನೀಯರಿಂಗ್, ಅಗ್ನಿಶಾಮಕ, ಅಂಕಿ-ಸಂಖ್ಯೆ ಇಲಾಖೆ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X