- ಹೀಗೆ ಮಾತನಾಡೋದು ಒಂದು ಸಮುದಾಯಕ್ಕೆ ಮಾಡಿದ ಅವಮಾನ ಅಲ್ಲವಾ?
- ಕೀಳಾಗಿ ಮಾತನಾಡೋದು ಯಾರೇ ಆದರೂ ನಿಲ್ಲಿಸಬೇಕು: ಪರಮೇಶ್ವರ್
ನಟ ಉಪೇಂದ್ರ ಹಾಗೂ ಸಚಿವ ಮಲ್ಲಿಕಾರ್ಜುನ ಅವರ ‘ಹೊಲೆಗೇರಿ’ ಹೇಳಿಕೆಗಳ ಬಗೆಗಿನ ದೂರಿನ ಬಗ್ಗೆ ಸಿಎಂ ಜೊತೆಗೆ ಚರ್ಚಿಸಿದ ಬಳಿಕ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ಪರಿಶಿಷ್ಟ ಜಾತಿಯವರ ವಿರುದ್ಧ ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ ಹೇಳಿಕೆ ವಿಚಾರವನ್ನು ನಾನೂ ಕೂಡ ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಗಮನಿಸಿದೆ. ಯಾರೂ ಕೂಡ ಇಂತಹ ಹೇಳಿಕೆಗಳನ್ನು ಸಹಿಸಲ್ಲ. ಹೀಗೆ ಮಾತನಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡೋದು ಯಾರೇ ಆದರು ನಿಲ್ಲಿಸಬೇಕು. ಗಾದೆ ಇದೆ ಅಂತ ಹೇಳಿ ಕೀಳಾಗಿ ಮಾತನಾಡೋದು ಸರಿಯಲ್ಲ. ಜಾತಿ ನಿಂದನೆ ಮಾಡಿರುವುದು ಉಪೇಂದ್ರ ಆಗ್ಲಿ, ನಮ್ಮದೇ ಸಚಿವರಾಗಲಿ. ತಪ್ಪು ತಪ್ಪೇ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಹೊಲಗೇರಿ ಇದ್ದ ಕಡೆಗೆ ಊರಿನ ಜನ ಬಂದರೆ ಹೊರತು- ಊರು ಇದ್ದ ಕಡೆ ಹೊಲಗೇರಿ ಎಂದಿಗೂ ಹೋಗಿಲ್ಲ
ಇದನ್ನು ನಿಲ್ಲಿಸಿದರೆ ಒಳ್ಳೆಯದು. ಇದನ್ನು ನಾನು ಕೂಡಾ ಸಹಿಸಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರು ಹೀಗೆ ಮಾತನಾಡೋದು ಒಂದು ಸಮುದಾಯಕ್ಕೆ ಮಾಡಿದ ಅವಮಾನ ಅಲ್ಲವಾ? ಇದು ಸರಿಯಲ್ಲ. ಸಚಿವರೇ ಆಗಲಿ ಯಾರೇ ಆಗಲಿ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ ಕೇಸ್ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.