ಪ್ರೌಢ ಶಾಲೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದ್ದರಿಂದ ಆಕೆ ಗರ್ಭಿಣಿಯಾಗಿದ್ದು, ಈ ಸಂಬಂಧ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ʼಮಗಳ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಗೋಕಾಕ ತಾಲ್ಲೂಕಿನ ನಾಗನೂರು ಗ್ರಾಮದ ಯುವನ್ ತಳಗಡೆ (19) ವಿರುದ್ಧ ದೂರು ನೀಡಿದ್ದರು.
ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಯುವಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿದು ಬಂದಿದೆ.