ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಆರು ವರ್ಷದ ಮಾತು ಬಾರದ ಬಾಲಕಿ ಮೇಲೆ ಯುವಕನೊಬ್ಬ ಲೈಂಗಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ʼಪಕ್ಕದ ಮನೆಯ ಯುವಕನು ಭಾನುವಾರ ಮಧ್ಯಾಹ್ನ ನಮ್ಮ ಮಗಳನ್ನು ಜಮೀನಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಆಕೆ ಅಳುತ್ತಿದ್ದಾಳೆ ಎಂದು ಆತನೇ ಕರೆದುಕೊಂಡು ಬಂದು ಮನೆಯ ಮುಂದೆ ಬಿಟ್ಟು ಹೋಗಿದ್ದಾನೆʼ ಎಂದು ಬಾಲಕಿಯ ಪೋಷಕರು ಗಾಣಗಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, 18 ವರ್ಷದ ಯುವಕ ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಕೊಪ್ಪಳ | ಪ್ರೌಢ ಶಾಲೆ ವಿದ್ಯಾರ್ಥಿನಿ ಗರ್ಭಿಣಿ : ಪೋಕ್ಸೊ ದಾಖಲು, ಯುವಕನ ಬಂಧನ