ಚಿಂತಾಮಣಿ ನಗರದಲ್ಲಿ ಕ್ಷುಲ್ಲಕ ಕಾರಣದ ಜಗಳ ಒಬ್ಬರ ಕೊಲೆಯಲ್ಲಿ ಅಂತ್ಯ.

Date:

Advertisements

ಚಿಂತಾಮಣಿ ನಗರದ ಎಂ ಜಿ ರಸ್ತೆಯ ಸರ್ಕಾರಿ ಆಸ್ಪತ್ರೆಯ ಮುಂಭಾಗದ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುವ ಇಬ್ಬರು ಕೆಲಸಗಾರರ ನಡುವೆ ಮಂಗಳವಾರ ಸಂಜೆ ನಡೆದ ಕ್ಷುಲ್ಲಕ ಕಾರಣದ ಜಗಳ ಒಬ್ಬರ ಕೊಲೆಯಲ್ಲಿ ಅಂತ್ಯಗೊಂಡಿದೆ.

ನಗರದ ನಾರಸಿಂಹಪೇಟೆಯ ನಿವಾಸಿ ಅರ್ಬಾಜ್(23) ವರ್ಷ ಮೃತಪಟ್ಟಿರುವ ಯುವಕ. ವೆಂಕಟಗಿರಿಕೋಟೆಯ ನಿವಾಸಿ ಫಹಾದ್ ಕೊಲೆ ಮಾಡಿರುವ ಆರೋಪಿ. ನಗರದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರುವ ವಾಸೀಮ್ ಎಂಬುವವರ ಹಣ್ಣಿನ ಅಂಗಡಿಯಲ್ಲಿ ಅರ್ಬಾಜ್ ಕೆಲಸ ಮಾಡುತ್ತಿದ್ದ. ಅದರ ಪಕ್ಕದಲ್ಲೇ ಇರುವ ಸಾಧಿಕ್ ಎಂಬುವವರ ಹಣ್ಣಿನ ಅಂಗಡಿಯಲ್ಲಿ ಫಹಾದ್ ಕೆಲಸ ಮಾಡುತ್ತಿದ್ದನು.


ಮಂಗಳವಾರ ಸಂಜೆ ಯಾವುದೋ ವಿಷಯಕ್ಕಾಗಿ ತಮಾಷೆಯಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಜಗಳ ಕೈ ಕೈ ಮಿಲಾಯಿಸುವ ಹಂತದಲ್ಲಿ ಪಹಾದ್ ಹಣ್ಣು ಕತ್ತರಿಸುವ ಚಾಕುವನ್ನು ಅರ್ಬಾಜ್ ಮೇಲೆ ಎಸೆದಿದ್ದಾನೆ. ಅದು ಕುತ್ತಿಗೆಗೆ ಬಿದ್ದು ಗಂಟಲು ಬಳಿ ಚುಚ್ಚಿಕೊಂಡಿದೆ. ಗಾಯಾಳುವನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಎಸ್ ಎನ್ ಆರ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಕೋಲಾರಕ್ಕೆ ಹೋಗುತ್ತಿರುವಾಗ ಮಾರ್ಗಮದ್ಯೆ ಸುಗಟೂರು ಬಳಿ ಮೃತಪಟ್ಟಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕೋಲಾರದ ಎಸ್ ಎನ್ ಆರ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ನಗರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿ ಫಹಾದ್ ಮತ್ತು ಚಾಕುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಆಕಸ್ಮಿಕವೋ ಅಥವಾ ಯಾವುದಾದರೂ ಹಳೆಯ ದ್ವೇಷವೋ ಎನ್ನುವುದು ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ.

ಇದನ್ನು ಓದಿದ್ದೀರಾ…? ಕೋಲಾರ | ಕಾಂಗ್ರೆಸ್ ಹಿರಿಯ ನಾಯಕ ಮೊಹಮ್ಮದ್ ಇಕ್ಬಾಲ್ ನಿಧನ

ಇನ್ನೂ ಸ್ಥಳಕ್ಕೆ ಜಿಲ್ಲಾ ಎಸ್ ಪಿ ಕುಶಾಲ್ ಚೌಕ್ಸೆ ಮತ್ತು ಸೆನ್ ಡಿವೈಎಸ್ಪಿ ರವಿಕುಮಾರ್, ನಗರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಿಜಿ ಕುಮಾರ್ ಮತ್ತು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X