ಧರ್ಮಸ್ಥಳ ಪ್ರಕರಣ | ವಕೀಲ ಮಂಜುನಾಥ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ: ಹೈಕೋರ್ಟ್‌

Date:

Advertisements

ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತನಿಖೆಯ ಬಗ್ಗೆ ವಕೀಲ ಎನ್ ಮಂಜುನಾಥ್ ಸುಳ್ಳು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ಆರೋಪ ಸಂಬಂಧ ಮಂಜುನಾಥ್ ವಿರುದ್ಧ ಪ್ರಕರಣವೂ ದಾಖಲಾಗಿದೆ. ಪ್ರಕರಣದಲ್ಲಿ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಬೆಳ್ತಂಗಡಿ ಪೊಲೀಸರಿಗೆ ಹೈಕೋರ್ಟ್‌ ಸೂಚಿಸಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಅನ್ನು ರದ್ದುಗೊಳಿಸುವಂತೆ ಕೋರಿ ಮಂಜುನಾಥ್ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ವಿಚಾರಣೆ ನಡೆಸಿದ್ದಾರೆ. ಮುಂದಿನ ವಿಚಾರಣೆವರೆಗೆ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ನಿರ್ದೇಶಿಸಿ ಮಧ್ಯಂತರ ಆದೇಶ ಹೊರಡಿಸಿದ್ದಾರೆ.

ಮಂಜುನಾಥ್ ಅವರ ಅರ್ಜಿಯಲ್ಲಿ ಪ್ರತಿವಾದಿಗಳೆಂದು ಉಲ್ಲೇಖಿಸಿರುವ ದೂರುದಾರ, ಧರ್ಮಸ್ಥಳದ ನಿವಾಸಿ ರಘುರಾಮ ಶೆಟ್ಟಿ ಮತ್ತು ಬೆಳ್ತಂಗಡಿ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಿದೆ. ಅಕ್ಟೋಬರ್ 8ರಂದು ನಡೆಯಲಿರುವ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಹಾಜರಾಗುವಂತೆ ಸೂಚಿಸಿದೆ.

ಜುಲೈ 30ರಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಮಂಜುನಾಥ್, “ಪಾಯಿಂಟ್ ನಂಬರ್ 1ರಲ್ಲಿ 2 ಶವಗಳು, ಪಾಯಿಂಟ್ ನಂಬರ್ 2 ಮತ್ತು 3ರಲ್ಲಿ ತಲಾ 2 ಮೃತದೇಹಗಳು, ಪಾಯಿಂಟ್ ನಂಬರ್‌ 4 ಮತ್ತು 5ರಲ್ಲಿ ತಲಾ 6 ಶವಗಳು, ಪಾಯಿಂಟ್ ನಂಬರ್​ 6 ಮತ್ತು 7ರಲ್ಲಿ ತಲಾ 8 ಮೃತದೇಹಗಳು, ಪಾಯಿಂಟ್​ ನಂಬರ್ 9ರಲ್ಲಿ 6-7, ಪಾಯಿಂಟ್ ನಂಬರ್ 10ರಲ್ಲಿ 3, ಪಾಯಿಂಟ್ ನಂಬರ್ 11ರಲ್ಲಿ 9 ಹಾಗೂ ಪಾಯಿಂಟ್ ನಂಬರ್​ ​12ರಲ್ಲಿ 4-5 ಮೃತದೇಹಗಳು ಪತ್ತೆಯಾಗಿವೆ. ಪಾಯಿಂಟ್ ನಂಬರ್ 13ರಲ್ಲಿ ಇನ್ನೂ ಅಧಿಕ ಮೃತದೇಹಗಳು ದೊರೆಯಲಿವೆ” ಎಂದು ಹೇಳಿದ್ದರು. ಅವರ ವಿರುದ್ಧ ಧರ್ಮಸ್ಥಳದ ರಘುರಾಮ್ ಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

Download Eedina App Android / iOS

X