ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳು ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟ ಹಾಗೂ ಅದರ ಬೆನ್ನಲ್ಲೇ ಬಿಜೆಪಿ ನಾಯಕರು ಮದ್ದೂರಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಈ ಪ್ರಕರಣದ ಬಗ್ಗೆ ಈಗಾಗಲೇ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯೆ ನಡಿದ್ದಾರೆ. ಹೊರ ರಾಜ್ಯಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ನನಗೆ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನನಗೆ ಸಂಪೂರ್ಣ ಮಾಹಿತಿ ಸಿಗದೇ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

“ಬಿಜೆಪಿಯವರಿಗೆ ರಾಜಕಾರಣ ಮಾಡುವುದು ಬಿಟ್ಟು ಬೇರೆ ಕೆಲಸ ಏನಿದೆ? ಅವರು ದೆಹಲಿಗೆ ಹೋಗಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ನರೇಗಾ ಅನುದಾನ, ಮೇಕೆದಾಟು, ಮಹದಾಯಿ ನೀರಾವರಿ ಯೋಜನೆಗಳಿಗೆ ಅನುಮತಿ ತೆಗೆದುಕೊಂಡು ಬರಲಿ” ಎಂದು ಸವಾಲೆಸೆದರು.

ಬೆಂಗಳೂರು ನಗರ ಶಾಸಕರ ಜೊತೆಗೆ ಸಿಎಂ ಸಭೆ ಬಗ್ಗೆ ಕೇಳಿದಾಗ, “ಈ ಸಭೆ ಮಂಗಳವಾರ ನಿಗದಿಯಾಗಿತ್ತು. ನಾನು ಕೊಯಮತ್ತೂರಿಗೆ ಹೋಗಬೇಕಿದ್ದ ಹಿನ್ನೆಲೆಯಲ್ಲಿ ಮುಂದೂಡುವಂತೆ ತಿಳಿಸಿದ್ದೆ. ಬುಧವಾರ ಸಂಜೆ ಈ ಸಭೆ ನಡೆದಿದೆ” ಎಂದು ತಿಳಿಸಿದರು.

ಜಿಬಿಎ ಅಡಿಯಲ್ಲಿ ರಚನೆಯಾಗಿರುವ ನೂತನ ಪಾಲಿಕೆಗಳಿಗೆ ಉಸ್ತುವಾರಿ ಸಚಿವರ ನೇಮಕದ ಬಗ್ಗೆ ಕೇಳಿದಾಗ, “ಮಂತ್ರಿಗಳು ಎಂದ ಮೇಲೆ ಕೇವಲ ತಮ್ಮ ಕ್ಷೇತ್ರಗಳ ಕೆಲಸ ಮಾತ್ರ ನೋಡುವುದಷ್ಟೇ ಅಲ್ಲ. ಇಡೀ ಜಿಲ್ಲೆ ಕಡೆ ಗಮನಹರಿಸಬೇಕು. ಕೆಲವು ಕಡೆ ನಾವು ಸೋತಿರುವ ಕ್ಷೇತ್ರಗಳಿವೆ. ಆ ಕ್ಷೇತ್ರಗಳಲ್ಲಿ ಸಮನ್ವಯತೆ ಸಾಧಿಸಬೇಕು. ಹೀಗಾಗಿ ಸಚಿವರಿಗೆ ಜವಾಬ್ದಾರಿ ವಹಿಸಲಾಗಿದೆ. ಇದರ ಜೊತೆಗೆ ಪಕ್ಷದ ವತಿಯಿಂದಲೂ ಸಂಘಟನೆ ವಿಚಾರವಾಗಿ ಜವಾಬ್ದಾರಿ ನೀಡಲಾಗುವುದು” ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಬಂಧನದ ವಿಚಾರವಾಗಿ ಕೇಳಿದಾಗ, “ಸತೀಶ್ ಸೈಲ್ ಅವರ ಬಂಧನದ ಅವಶ್ಯಕತೆ ಇರಲಿಲ್ಲ. ಈ ಪ್ರಕರಣದ ವಿಚಾರಣೆ 2010ರಿಂದಲೇ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರ ಮೇಲೆ ಮಾತ್ರ ಗುರಿಯಾಗಿಸಿ ಇಂತಹ ದಾಳಿಗಳು ನಡೆಯುತ್ತಿವೆ. ಆಮೂಲಕ ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡುವ ಕೆಲಸ ನಡೆಯುತ್ತಿದೆ” ಎಂದು ತಿಳಿಸಿದರು.

“ಜವಾಹರ್ ಬಾಲ ಮಂಚ್ ವತಿಯಿಂದ ಸುಮಾರು 24 ಮಕ್ಕಳನ್ನು ರಾಜಸ್ಥಾನದಲ್ಲಿ ನಡೆಯಲಿರುವ ರಾಷ್ಟ್ರೀಯ ಶಿಬಿರಕ್ಕೆ ಕಳುಹಿಸಲಾಗುತ್ತಿದೆ. ಅವರಿಗೆ ಶುಭ ಹಾರೈಸುತ್ತಿದ್ದೇನೆ. ನಾನೇ ಈ ಮಕ್ಕಳ ಪ್ರಯಾಣ ವೆಚ್ಚವನ್ನು ಭರಿಸಿ ಕಳುಹಿಸುತ್ತಿದ್ದೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

Download Eedina App Android / iOS

X