ರಾಜ್ಯದಲ್ಲಿ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆಯನ್ನು ನೀಡಲಾಗುತ್ತದೆ. ವಾರದಲ್ಲಿ ಎರಡು ದಿನ ಊಟದೊಂದಿಗೆ ಮೊಟ್ಟೆ ನೀಡುವ ಕಾರ್ಯಕ್ರಮವು ಆಗಸ್ಟ್ 18ರಿಂದ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾವಣೆ ತರಲಾಗುತ್ತಿದೆ. ಇದೂವರೆಗೂ 8ನೇ ತರಗತಿವರೆಗೆ ಮಾತ್ರ ಮೊಟ್ಟೆ ನೀಡಲಾಗುತ್ತಿತ್ತು. ಇನ್ನು ಮುಂದೆ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡಲಾಗುತ್ತದೆ” ಎಂದಿದ್ದಾರೆ.
“ಆಗಸ್ಟ್ 18ರಂದು ಕಾರ್ಯಕ್ರಮಕ್ಕೆ ಮಂಡ್ಯದಲ್ಲಿ ಚಾಲನೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೆತ್ರದಲ್ಲಿ ಇನ್ನೂ ಹಲವು ಬದಲಾವಣೆಗಳು ಬರಲಿವೆ” ಎಂದು ಹೇಳಿದ್ದಾರೆ.
“ಡಿಜಿಟಲ್ ಲೈಬ್ರರಿಯಲ್ಲಿ 40 ಲಕ್ಷದಷ್ಟು ಪುಸ್ತಕಗಳಿವೆ. ಈ ಕಾರ್ಯಕ್ರಮಕ್ಕೆ ಸೆ.5ರಂದು ಮರು ಚಾಲನೆ ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ.