ಹಾಡಹಗಲೇ ಮದ್ಯಪಾನ ಸೇವಿಸಿ, ಅಂಗಡಿ ಮುಂದೆ ಮಲಗಿದ್ದವನನ್ನು ಎಬ್ಬಿಸಲು ಹೋದ ಬಾರ್ ಸಿಬ್ಬಂದಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹುಬ್ಬಳ್ಳಿಯಲ್ಲಿ ಮದ್ಯದಂಗಡಿ ಮುಂದೆ ಕುಡಿದು ಮಲಗಿದ್ದವನು ಅಂಗಡಿ ಸಿಬ್ಬಂದಿಗೆ ಚಾಕು ಇರಿದ ದೃಶ್ಯವನ್ನು ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸುರತ್ಕಲ್ | ರಸ್ತೆಗುಂಡಿಗೆ ಬಿದ್ದ ಮಹಿಳೆ ಸಾವು: ಎನ್‌ಎಚ್ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ಎಫ್‌ಐಆರ್
ಹುಬ್ಬಳ್ಳಿ ರೈಲ್ವೆ ಸ್ಟೇಷನ್ ಬಳಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಬಾರ್ ಸಿಬ್ಬಂದಿಗೆ ಹಾಗೂ ಚಾಕು ಇರಿದ ವ್ಯಕ್ತಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಚಾಕು ಇರಿತಕ್ಕೆ ಒಳಗಾಗಿದ್ದ ಯುವಕನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಹುಬ್ಬಳ್ಳಿ ಧಾರವಾಡ ಕಮಿಷನರೇಟ್‌ನ ಡಿಸಿಪಿ ನಂದಗಾವಿ ಭೇಟಿ ನೀಡಿ ಪ್ರಕರಣದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.