ಕಲಬುರಗಿ | ವೈದ್ಯಕೀಯ ಕಾಲೇಜುಗಳಲ್ಲಿ NRI ಕೋಟಾ ರದ್ದುಗೊಳಿಸಲು AIDSO ಆಗ್ರಹ

Date:

Advertisements

ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಸ್ತುತ ಇರುವ 15% NRI ಕೋಟಾವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕಲಬುರಗಿ ನಗರದಲ್ಲಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಪೂಡೆಂಟ್ಸ್ ಆರ್ಗನೈಸೇಷನ್ (AIDSO) ಜಿಲ್ಲಾ ಘಟಕ ಬೃಹತ್ ಪ್ರತಿಭಟನೆ ನಡೆಸಿತು.

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕೋಟಾಗಳ ಹೆಸರಿನಲ್ಲಿ ವ್ಯಾಪಾರೀಕಣ ನಿಲ್ಲಿಸಿ, ಬಡ ವಿದ್ಯಾರ್ಥಿಗಳ ಸೀಟುಗಳನ್ನು 25 ಲಕ್ಷ ರೂಪಾಯಿಗೆ ಹರಾಜು ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಧಿಕ್ಕಾರ! ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್ ಕೆ ಮಾತನಾಡಿ, “2025 26ನೇ ಸಾಲಿನಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 15% ಎನ್ಆರ್‌ಐ ಕೋಟಾವನ್ನು ಆರಂಭಿಸುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯು ಅತ್ಯುಗವಾಗಿ ಖಂಡಿಸುತ್ತದೆ. ಇದು ವೈದ್ಯಕೀಯ ಶಿಕ್ಷಣದ ಕನಸು ಹೊತ್ತ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಹುದೊಡ್ಡ ಅನ್ಯಾಯ ಮಾಡುತ್ತದೆ. ಈಗಾಗಲೇ ಅಖಿಲ ಭಾರತ ಕೋಟಾದಡಿ 15% ಸೀಟುಗಳನ್ನು ನೀಡಲಾಗುತ್ತಿದೆ. ಇನ್ನೂ 15% ಸೀಟುಗಳು ಎನ್‌ಆರ್‌ಐ ಕೋಟಾಗೆ ನೀಡಿದರೆ 200 ವಿದ್ಯಾರ್ಥಿಗಳ ಒಂದು ಬ್ಯಾಚಿನಲ್ಲಿ 140 ಸೀಟುಗಳು ಮಾತ್ರ ರಾಜ್ಯದ ವಿದ್ಯಾರ್ಥಿಗಳಿಗೆ ಉಳಿದಂತಾಗುತ್ತದೆ” ಎಂದರು.

“ಸರ್ಕಾರಿ ವೈದ್ಯಕೀಯ ಕಾಲೇಜುಗಳು ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ಸ್ಥಾಪಿಸಲಾಗಿದೆ. ಶ್ರೀಮಂತ ಎನ್.ಆರ್.ಐ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡುವ ಮೂಲಕ, ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುವ ನೂರಾರು ಶ್ರಮಜೀವಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಅವಕಾಶವನ್ನು ರಾಜ್ಯ ಸರ್ಕಾರವು ಮೊಟಕುಗೊಳಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ

ಎಐಡಿಎಸ್‌ಒ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ ಮಾತನಾಡಿ, “ಕರ್ನಾಟಕದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2,447 ಬೋಧಕ ಹುದ್ದೆಗಳು ಖಾಲಿ ಇರುವ ಸಮಯದಲ್ಲಿ, ಸರ್ಕಾರವು ಈ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಮೂಲಸೌಕರ್ಯವನ್ನು ಸುಧಾರಿಸಲು ಆದ್ಯತೆ ನೀಡಿ, ಬೋಧಕವರ್ಗ ಮತ್ತು ಸೌಲಭ್ಯಗಳನ್ನು ಬಲಪಡಿಸುವ ಜವಾಬ್ದಾರಿ ಸರ್ಕಾರ ತೆಗೆದುಕೊಳ್ಳಬೇಕು. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 15% ಎನ್.ಆರ್.ಐ ಕೋಟಾ ಯೋಚನೆ ಕೂಡಲೇ ಕೈ ಬಿಡಬೇಕು ಹಾಗೂ ಅರ್ಹ ಮತ್ತು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು” ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ಈ ಹೋರಾಟದಲ್ಲಿ ಜಿಲ್ಲಾ ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ, ಗೋವಿಂದ ಯಳವಾರ, ನಾಗರಾಜ ರಾವೂರ್, ಜಿಲ್ಲಾ ಸಮಿತಿ ಸದಸ್ಯರಾದ ಯುವರಾಜ, ರಾಹುಲ್, ಸಿದ್ದಾರ್ಥ್, ಸ್ಫೂರ್ತಿ, ಸಂಪತ್‌, ಅಕ್ಷತಾ, ಸುಧಾ, ಸೌಮ್ಯ, ಚೇತನ್, ಸಚಿನ್ ರೋಹಿತ್, ಬಸವರಾಜ್, ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X