ಕೋಚಿಮುಲ್ ವತಿಯಿಂದ ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ವಿತರಣೆ

Date:

Advertisements

ಬಾಗೇಪಲ್ಲಿ:-ಪಟ್ಟಣದ ಕೋಚಿಮುಲ್ ಕಚೇರಿಯಲ್ಲಿ ಬುಧವಾರ ಹಲವು ಸರ್ಕಾರಿ ಶಾಲೆಗಳಾದ
ದೇವಿರೆಡ್ಡಿಪಲ್ಲಿ,ನಲ್ಲಪರೆಡ್ಡಿಪಲ್ಲಿ,ಸಡ್ಲವಾರಿಪಲ್ಲಿ,ಪಾತಬಾಗೇಪಲ್ಲಿ,ಹಾಗೂ ಪಟ್ಟಣದ ಪಿ.ಎಂ.ಶ್ರೀ ಶಾಲೆ,
ಪಟ್ಟಣದ ನ್ಯಾಷನಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಹಾಗೂ ಬ್ಯಾಗ್ ವಿತರಿಸುವ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಯವರು,ಚೀಮುಲ್ ವತಿಯಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ನಡೆಸಲಾಗುತ್ತಿದೆ. ಅವೆಲ್ಲವುಗಳ ಪೈಕಿ ಸರಕಾರಿ ಶಾಲೆಗಳ ಮಕ್ಕಳಿಗೆ ಅನುಕೂಲ ಮಾಡಿಕೊಡುತ್ತಿರುವುದು ಬಹಳಷ್ಟು ಖುಷಿಯ ವಿಚಾರವಾಗಿದೆ.ಈ ಭಾಗದಲ್ಲಿ ಮಕ್ಕಳು ಶೈಕ್ಷಣಿಕವಾಗಿ ಮುಂದುವರೆಯಬೇಕು,ಶೈಕ್ಷಣಿಕ ಪ್ರಗತಿಯೇ ನಿಜವಾದ ಅಭಿವೃದ್ಧಿಯಾಗುತ್ತದೆ ಎಂದರು. ಆ ನಿಟ್ಟಿನಲ್ಲಿ ತಾಲೂಕಿನಲ್ಲಿ ವಸತಿ ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮವಾಗುತ್ತಿದೆ. ಆ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗೊಂದು ವಸತಿ ಶಾಲೆಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದೇ ವೇಳೆ ಚೀಮುಲ್ ನಿರ್ದೇಶಕ ಮಂಜುನಾಥರೆಡ್ಡಿ ಮಾತನಾಡಿ, ಸರಕಾರಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ಸೇರಿದಂತೆ ಶಾಲಾ ಬ್ಯಾಗ್ ಮತ್ತು ಇತರ ಸಾಮಗ್ರಿ ಕೊಡುವುದಕ್ಕಿಂತಲೂ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಬೆರಳತುದಿಗಳಲ್ಲೇ ಪ್ರಪಂಚದ ಹಾಗೂ ಹೋಗುಗಳ ಬಗ್ಗೆ ತಿಳಿದುಕೊಳ್ಳುವುದರಿಂದ
ಬಡ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲ್ಯಾಪ್ಟಾಪ್ ಮತ್ತು ಕಂಪ್ಯೂಟರ್ಗಳನ್ನ ನೀಡಲಾಗುತ್ತಿದೆ ಇದರಿಂದ ಬಹಳ ಸಂತಸ ತಂದಿದೆ‌. ಮುಂದಿನ ದಿನಗಳಲ್ಲಿ ಎಸ್ಎಸ್ಎಲ್ ಸಿ,ಪಿಯುಸಿ ಹಾಗೂ ಐಎಎಸ್ ಪರೀಕ್ಷೆಗಳಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ…? ಬಾಗೇಪಲ್ಲಿ | ಸಾಲುಗಟ್ಟಿ ನಿಂತರೂ ಸಿಗದ ರಸಗೊಬ್ಬರ; ಸರ್ಕಾರದ ವಿರುದ್ಧ ರೈತರ ಆಕ್ರೋಶ

ಈ ವೇಳೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರ್.ಹನುಮಂತ ರೆಡ್ಡಿ ಪಿಎಲ್‌ಡಿ ಬ್ಯಾಂಕ್ ನ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ, ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ,ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ನಾಗರಾಜ್ , ಶಿಕ್ಷಕರಾದ ವೈ.ಎ ಮಂಜುನಾಥ್, ಮುನಿರಾಜು ಮಂಜುಳಾ ಮತ್ತಿತರರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X