ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಸಾವನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಶಾನುವಳ್ಳಿ ವ್ಯಾಪ್ತಿಯ ನಿಲುವಾಗಿಲು ಸಮೀಪ ಕೊಡ್ತಾಳ್ ಎಂಬಲ್ಲಿ ನಡೆದಿದೆ.
ಅಸಹಜ ಸಾವಿಗೆ ಶರಣಾದ ವಿದ್ಯಾರ್ಥಿ ಸುಶಾಂತ್, ಕೊಪ್ಪ ತಾಲೂಕಿನ ಜಿಜೆಸಿ ಶಾಲೆಯ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಬುಧವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.
ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಕಾಡಾನೆ ದಾಳಿ: ರೈತರ ಬೆಳೆ ಹಾನಿ
ವಿದ್ಯಾರ್ಥಿಯ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಈ ಕುರಿತು ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.