ನೇಪಾಳ ಹಿಂಸಾಚಾರ | ಪದಚ್ಯುತ ಪ್ರಧಾನಿ ಕೆ.ಪಿ ಓಲಿ ‘ಎಮೋಷನಲ್ ಕಾರ್ಡ್‌’ ಬಳಕೆ; ನನಗೆ ಮಕ್ಕಳಿಲ್ಲವೆಂದು ಭಾವುಕ

Date:

Advertisements

ನೇಪಾಳದ ಪದಚ್ಯುತ ಪ್ರಧಾನಿ ಮತ್ತು ಸಿಪಿಎನ್-ಯುಎಂಎಲ್ ಅಧ್ಯಕ್ಷ ಕೆ.ಪಿ ಓಲಿ ಶರ್ಮಾ ಅವರು ‘ಜನ್‌ ಝಡ್‌’ ಪ್ರತಿಭಟನೆಯ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಹಿಂಸಾಚಾರದ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅವರು, ಶಾಂತಿಗಾಗಿ ಯುವಜನರಲ್ಲಿ ಮನವಿ ಮಾಡಿದ್ದಾರೆ.

ಮಿಲಿಟರಿ ರಕ್ಷಣೆಯಲ್ಲಿ ಶಿವಪುರಿಯಲ್ಲಿರುವುದಾಗಿ ಹೇಳಿಕೊಂಡಿರುವ ಓಲಿ, “ಪ್ರತಿಭಟನೆಯ ಸಮಯದಲ್ಲಿ ಪೊಲೀಸ್ ಗುಂಡಿನ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಯುವಜನರಿಗೆ ಭಾವಪೂರ್ಣ ಗೌರವ ಸಲ್ಲಿಸುತ್ತೇನೆ” ಎಂದಿದ್ದಾರೆ. ಅಲ್ಲದೆ, ತಮಗೆ ಸ್ವಂತ ಮಕ್ಕಳಿಲ್ಲ ಎಂದು ಹೇಳಿಕೊಂಡಿದ್ದಾರೆ. ಇದನ್ನು, ಭಾವನಾತ್ಮಕ ಕಾರ್ಡ್‌ ಬಳಕೆ (ಎಮೋಷನಲ್ ಕಾರ್ಡ್‌ ಪ್ಲೇ) ಎಂದು ನೇಪಾಳಿಗರು ಕರೆದಿದ್‌ದಾರೆ.

ಲಿಖಿತ ಸಂದೇಶ ನೀಡಿರುವ ಓಲಿ, “ನಡೆಯುತ್ತಿರುವ ಪ್ರತಿಭಟನೆಗಳ ಹಿಂದೆ ಕೆಲವು ಶಕ್ತಿಗಳು ಕೆಲಸ ಮಾಡಿದೆ. ಆ ಶಕ್ತಿಗಳು ಯುವ ಪ್ರತಿಭಟನಾಕಾರರನ್ನು ವಿನಾಶಕಾರಿ ಹಿಂಸಾಚಾರದಲ್ಲಿ ತೊಡಗುವಂತೆ ಪ್ರೇರೇಪಿಸಿವೆ. ಪ್ರಮುಖ ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಚ್ಚಲಾಗಿದೆ. ಯುವಜನರ ಮುಗ್ಧ ಮುಖಗಳನ್ನು ವಂಚನೆಯ ರಾಜಕೀಯಕ್ಕಾಗಿ ಬಳಸಲಾಗುತ್ತಿದೆ” ಎಂದು ಅವರು ಬರೆದಿದ್ದಾರೆ.

ಈ ಲೇಖನ ಓದಿದ್ದೀರಾ?: ನೆರೆಯ ರಾಷ್ಟ್ರಗಳ ಅರಾಜಕತೆಯಿಂದ ಪಾಠ ಕಲಿತು, ಸರಿ ದಾರಿಗೆ ಬರುವುದೇ ಭಾರತ?

“ಬದಲಾವಣೆಗಾಗಿ ನಡೆದ ಹೋರಾಟದ ಸಮಯದಲ್ಲಿ ದೇಶವು ಎದುರಿಸಿದ ಕಷ್ಟಗಳಿಂದಾಗಿ, ನನಗೆ ಮಕ್ಕಳನ್ನು ಹೊಂದಲು ಸಾಧ್ಯವಾಗಲಿಲ್ಲ. ಆದರೆ ತಂದೆಯಾಗುವ ಬಯಕೆ ಎಂದಿಗೂ ಸಾಯಲಿಲ್ಲ” ಎಂದು ಹೇಳಿಕೊಂಡಿದ್ದಾರೆ. ತಾವು 1994ರಲ್ಲಿ ಗೃಹ ಸಚಿವರಾಗಿದ್ದ ಸಮಯವನ್ನು ನೆನಪಿಸಿಕೊಂಡಿರುವ ಓಲಿ, ತಮ್ಮ ಆಡಳಿತದಲ್ಲಿ ಯಾವುದೇ ಗುಂಡುಗಳು ಹಾರಲಿಲ್ಲ. ಶಾಂತಿಗೆ ನಾನು ಎಂದಿಗೂ ಬದ್ದನಾಗಿದ್ದೇನೆ ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

Download Eedina App Android / iOS

X