ಉದ್ಘಾಟನೆಯಾದ ಎರಡೇ ತಿಂಗಳಲ್ಲಿ ಪಲವಾ ಸೇತುವೆಯ ರಸ್ತೆ ಕಣ್ಮರೆ; ಭಾರೀ ಟ್ರೋಲ್-ಆಕ್ರೋಶ

Date:

Advertisements

ಸುಮಾರು ಎರಡು ತಿಂಗಳ ಹಿಂದೆ (ಜುಲೈ 4) ಉದ್ಘಾಟನೆಯಾಗಿದ್ದ ಸೇತುವೆಯೊಂದು ಈಗ ಭಾರೀ ಟ್ರೋಲ್ ಆಗುತ್ತಿದೆ. ಆ ಸೇತುವೆಯ ಸ್ಥಿತಿ ತೀರಾ ಕೆಟ್ಟದಾಗಿದ್ದು, ಸರ್ಕಾರದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪಲವಾ ನಗರದ ಬಳಿ ದೇಸಾಯ್ ಕ್ರೀಕ್‌ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ‘ಪಲವಾ ಸೇತುವೆ’ ಕಲ್ಯಾಣ್-ಶೀಲ್ ರಸ್ತೆಯ ಭಾಗವಾಗಿದೆ. ಈ ಸೇತುವೆಯಲ್ಲಿ 562 ಮೀಟರ್ ಉದ್ದದ ಈ ಸೇತುವೆಯನ್ನು 72 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಈ ಸೇತುವೆಯು ಮುಂಬೈ-ನವಿ ಮುಂಬೈನಿಂದ ಡೊಂಬಿವಲಿ, ಅಂಬರ್ನಾಥ್, ಬದ್ಲಾಪುರಕ್ಕೆ ಸಂಪರ್ಕ ಒದಗಿಸುತ್ತದೆ.

ಜುಲೈ 4ರಂದು ಸೇತುವೆಯನ್ನು ಉದ್ಘಾಟಿಸಲಾಗಿತ್ತು. ಉದ್ಘಾಟನೆಗೊಂಡ ಒಂದೇ ವಾರದಲ್ಲಿ ರಸ್ತೆಯ ಡಾಂಬರು ಕಿತ್ತು ಬಂದು, ಜೆಲ್ಲಿಕಟ್ಟುಗಳು ಹೊರಬರಲಾರಂಭಿಸಿದ್ದವು. ರಸ್ತೆಯ ಜುಲೈ ತಿಂಗಳಿನಲ್ಲೇ ಭಾರೀ ಚರ್ಚೆಗೆ ಗುರಿಯಾಗಿತ್ತು. ಸೇತುವೆಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಕೆಲವು ದುರಸ್ತಿ ಕೆಲಸಗಳನ್ನು ಮಾಡುವ ಮೂಲಕ ಸೇತುವೆಯನ್ನು ಮತ್ತೆ ಸಂಚಾರಕ್ಕೆ ತೆರೆಯಲಾಗಿತ್ತು. ಆದರೆ, ಈಗ ಎರಡೇ ತಿಂಗಳಲ್ಲಿ ಮತ್ತೆ ಸೇತುವೆ ಸ್ಥಿತಿ ಚಿಂತಾಜನಕವಾಗಿದೆ. ಸೇತುವೆಯ ಉದ್ದಕ್ಕೂ ಡಾಂಬರಿಗಿಂತ ಹೆಚ್ಚಾಗಿ ಗುಂಡಿಗಳೇ ಕಾಣುತ್ತಿವೆ. ರಸ್ತೆ ಬಹುತೇಕ ಕಣ್ಮರೆಯಾಗಿದೆ.

ಇದರಿಂದಾಗಿ, ಅನೇಕ ಚಾಲಕರು ಸೇತುವೆಯ ಬದಲಿಗೆ ಕೆಳಗೆ ಸಿಗ್ನಲ್ ಇರುವ ರಸ್ತೆಯನ್ನು ಬಳಸುತ್ತಿದ್ದಾರೆ. ವಿಶೇಷವೆಂದರೆ ಈ ಸೇತುವೆಯ ಮೇಲೆ ಅನೇಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸಲಾಗಿದೆ. ಗುಂಡಿಗಳಿರುವಾಗ ಸ್ಪೀಡ್ ಬ್ರೇಕರ್‌ಗಳ ಅಗತ್ಯವೇನು ಎಂದು ಪ್ರಯಾಣಿಕರು ವ್ಯಂಗ್ಯವಾಡಿದ್ದಾರೆ. ಸೇತುವೆ ನಿರ್ಮಾಣದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X