ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಸಿ ಟಿ ರವಿ ವಿರುದ್ಧ ಸುವೋ ಮೋಟೋ ಪ್ರಕರಣ ದಾಖಲು

Date:

Advertisements

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಎಂಎಲ್‌ಸಿ ಸಿ ಟಿ ರವಿ ವಿರುದ್ಧ ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಆರೋಪ: ಸಿ ಟಿ ರವಿ ವಿರುದ್ಧ ಸುವೋ ಮೋಟೋ(ಸ್ವಯಂಪ್ರೇರಿತ) ದೂರು ದಾಖಲಾಗಿದೆ.

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಬುಧವಾರ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಸಿ ಟಿ ರವಿ ಭಾಷಣ ಮಾಡಿದ್ದು, “ಟಿಪ್ಪು ಮತ್ತು ಅವರ ಅಪ್ಪನನ್ನೇ ಬಿಟ್ಟಿಲ್ಲ ನಾವು. ಇನ್ನು ನಿಮ್ಮನ್ನು ಬಿಡುತ್ತೀವಾ? ನಮಗೆ ತೊಡೆ ತಟ್ಟುವ ಕೆಲಸ ಮಾಡಬೇಡಿ. ಅಗತ್ಯಬಿದ್ದರೆ ನಾವು ತೊಡೆನೂ ತಟ್ಟುತ್ತೇವೆ, ತಲೆನೂ ತೆಗೆಯುತ್ತೇವೆ” ಎಂದು ದ್ವೇಷ ಭಾಷಣ ಮಾಡಿದ್ದರು.

“ನಾವು ಜಗತ್ತಿಗೆ ಸರ್ವೇ ಜನ ಸುಖಿನೋ ಭವಂತು ಅಂತ ಹೇಳುವ ಜನ. ನೀವು ನಮ್ಮನ್ನು ಕಾಫಿರರು ಅಂತ ನೋಡ್ತೀರಿ? ನಮ್ಮ ವಿಚಾರಗಳನ್ನು ಧ್ವಂಸ ಮಾಡುತ್ತೀರಿ? ಇಸ್ಲಾಂ ಹುಟ್ಟಿದ್ದು 1600 ವರ್ಷಗಳ ಹಿಂದೆ. ಹಿಂದೂ ಧರ್ಮ ಹುಟ್ಟಿರುವುದು 16 ಸಾವಿರ ವರ್ಷಗಳ ಹಿಂದೆ. ಎಲ್ಲ ಬಿಟ್ಟು ನೆಮ್ಮದಿಯಿಂದ ನೀವೂ ಇರಿ. ನಾವೂ ಇರುತ್ತೇವೆ” ಎಂದಿದ್ದರು.

ಈ ಹಿನ್ನೆಲೆಯಲ್ಲಿ ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ.

ಸಮುದಾಯಗಳ ನಡುವೆ ದ್ವೇಷ ಉಂಟುಮಾಡುವ ಮತ್ತು ಸೌಹಾರ್ದತಾ ಭಾವನೆಗಳಿಗೆ ಭಾದಕವಾಗುವಂತೆ, ವೈರತ್ವ, ದ್ವೇಷ ಉಂಟಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿದ್ದೀರಾ? ‘ತೊಡೆನೂ ತಟ್ಟುತ್ತೇವೆ, ತಲೆನೂ ತೆಗೆಯುತ್ತೇವೆ’ ಮದ್ದೂರಿನಲ್ಲಿ ಸಿ ಟಿ ರವಿ ದ್ವೇಷ ಭಾಷಣ

ಸುವೋ ಮೋಟೋ ಪ್ರಕರಣ ದಾಖಲಾದ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳಿಗೆ ಸಿ ಟಿ ರವಿ ಪ್ರತಿಕ್ರಿಯಿಸಿದ್ದು, “ನನ್ನ ರಕ್ತ ಬೆರಕೆಯಲ್ಲ, ಪ್ಯೂರ್‌ ಹಿಂದುತ್ವ. ಮಿಸ್ಟರ್ ಮಂಜುನಾಥ್, ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಧ್ವನಿವರ್ಧಕ ಬಳಸುವಂತಿಲ್ಲ, ಸುಪ್ರೀಂ ಕೋರ್ಟ್ ಆದೇಶವಿದೆ. ನನ್ನ ಮೇಲೆ ಕೇಸ್ ಹಾಕಿ ನಿಯತ್ತು ತೋರಿಸುವುದಲ್ಲ. ನಾಳೆ ನೀನು ಮದ್ದೂರು ವ್ಯಾಪ್ತಿಯಲ್ಲಿ ಸುಮೊಟೊ ಕೇಸ್ ಹಾಕಬೇಕು. ಯಾರ‍್ಯಾರು ಬೆಳಿಗ್ಗೆ 5ಕ್ಕೆ ಕೂಗ್ತಾರೆ, ಅವರ ಮೇಲೆ ಕೇಸ್ ಹಾಕಿ ಖಾಕಿ ಬಟ್ಟೆಗೆ ನಿಯತ್ತು ಇದೆಯೆಂದು ತೋರಿಸು” ಎಂದು ಅಧಿಕಾರಿಯ ವಿರುದ್ಧ ನಾಲಗೆ ಹರಿಬಿಟ್ಟಿದ್ದಾರೆ.

“ಕೇಸ್ ನನಗೆ ಹೊಸದಲ್ಲ, ಕೇಸಿಗೆ ಹೆದರುವ ಜಾಯಮಾನದವನೂ ನಾನಲ್ಲ. ನೀವು ಕಲ್ಲು ಹೊಡೆದು, ತೊಡೆ ತಟ್ಟಿ, ಪೆಟ್ರೋಲ್ ಬಾಂಬ್ ಹಾಕಿದರೆ, ಸಹಿಸುವ ಕಾಲ ಮುಗಿದಿದೆ ಎಂದಿದ್ದೆ. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಹೇಳಿದ್ದೆ, ಪ್ರೀತಿಗೆ ಪ್ರೀತಿ-ಕಲ್ಲಿಗೆ ಕಲ್ಲು ಎಂದಿದ್ದೆ. ನನ್ನ ಹೇಳಿಕೆಗೆ ಇಂದಿಗೂ ನಾನು ಬದ್ಧ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

Download Eedina App Android / iOS

X