ಚಾಮರಾಜನಗರ | ವಿಕಲಚೇತನರಿಗೆ ಸಾಧನ ಸಲಕರಣೆ ಸೌಲಭ್ಯಕ್ಕಾಗಿ ತಪಾಸಣಾ ಶಿಬಿರ

Date:

Advertisements

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ಸೌಲಭ್ಯ ವಿತರಿಸುವ ಸಂಬಂಧ ತಪಾಸಣಾ ಶಿಬಿರ ಏರ್ಪಡಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ವಹಿಸಿ ಮಾತನಾಡಿದರು.

ಭಾರತ ಸರ್ಕಾರ ಸಾಮ್ಯದ ಬೆಂಗಳೂರಿನ ಅಲಿಮ್ಕೊ ಸಂಸ್ಥೆಯ ನೇತೃತ್ವದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ಒದಗಿಸುವ ಉದ್ದೇಶದಿಂದ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಸಂಭಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಲಚೇತನರ ತಪಾಸಣೆ ನಡೆಸಿ ಅಗತ್ಯವಿರುವ ಉಪಕರಣಗಳನ್ನು ನೀಡುವ ಸಂಬಂಧ ಜಿಲ್ಲಾ ಕೇಂದ್ರ ಸೇರಿದಂತೆ, ಎಲ್ಲಾ ತಾಲೂಕು ಕೇಂದ್ರಗಳಲ್ಲಿ ತಪಾಸಣಾ ಶಿಬಿರಗಳನ್ನು ಏರ್ಪಡಿಸಬೇಕಿದೆ. ಈ ಶಿಬಿರದಲ್ಲಿ ವೈದ್ಯ, ತಜ್ಞರು, ತಾಂತ್ರಿಕ ಸಿಬ್ಬಂದಿ ಭಾಗವಹಿಸಲಿದ್ದಾರೆ. ಇವರಿಗೆ ನೆರವಾಗಲು ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಕಾರ್ಯಕರ್ತರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ನಿಯೋಜಿಸಬೇಕೆಂದು ತಿಳಿಸಿದರು.

ತಪಾಸಣಾ ಶಿಬಿರ ನಡೆಸಿಕೊಡಲು ಆಗಮಿಸಲಿರುವ ತಜ್ಞರು, ತಾಂತ್ರಿಕ ಸಿಬ್ಬಂದಿಗೆ ಅಗತ್ಯವಿರುವ ಪೀಠೋಪಕರಣ, ಕೊಠಡಿಗಳು, ತಪಾಸಣೆಗಾಗಿ ಈ ಹಿಂದೆ ನಿಗದಿಪಡಿಸಲಾಗಿದ್ದ ವಿಶಾಲ ಸ್ಥಳಗಳಲ್ಲಿ ಅವಶ್ಯಕ ಸೌಕರ್ಯಗಳನ್ನು ಒದಗಿಸಬೇಕು. ವಿಕಲಚೇತನರು ಶಿಬಿರದ ಸ್ಥಳಕ್ಕೆ ಬರಲು ಹಾಗೂ ತಪಾಸಣೆಯ ನಂತರ ಮರಳಿ ಊರಿಗೆ ತೆರಳಲು ಅಗತ್ಯ ಸಾರಿಗೆ ವ್ಯವಸ್ಥೆಯನ್ನು ಮಾಡಬೇಕು ಎಂದರು.

ಶಿಬಿರಕ್ಕೆ ಬರುವ ವಿಶೇಷಚೇತನರಿಗೆ ಉಪಹಾರ, ಶುದ್ದ ಕುಡಿಯುವ ನೀರು ವ್ಯವಸ್ಥೆಯಾಗಬೇಕು. ಶಿಬಿರಗಳಿಗೆ ವಿಶೇಷಚೇತನರು ತಪ್ಪದೇ ಪಾಲ್ಗೊಳ್ಳಲು ಅನುವಾಗುವಂತೆ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರ ಸಭೆಯನ್ನು ಮುಂಚಿತವಾಗಿ ಕರೆದು ಫಲಾನುಭವಿಗಳ ಪಟ್ಟಿ ತಯಾರಿಸಬೇಕು. ವಿಕಲಚೇತನರು, ಹಿರಿಯ ನಾಗರಿಕರ ನೊಂದಣಿ ಕಾರ್ಯ ಕೈಗೊಂಡು ಸಂಬಂಧಪಟ್ಟವರಿಗೆ ಸೂಕ್ತ ಜವಾಬ್ದಾರಿ ನಿರ್ವಹಿಸಲು ತಿಳಿಸಬೇಕು ಎಂದು ನಿರ್ದೇಶನ ನೀಡಿದರು.

ವಿಕಲಚೇತನರು ಮಾತ್ರವಲ್ಲದೇ 60 ವರ್ಷ ಮೀರಿದ ಹಿರಿಯ ನಾಗರಿಕರಿಗೆ ಶ್ರವಣ ಸಾಧನ, ನಡಿಗೆ ಕೋಲು ಇತ್ಯಾದಿ ಸೌಲಭ್ಯಗಳಿಗೆ ಅವಕಾಶವಿದೆ. ಶ್ರವಣ, ಕಣ್ಣು, ದಂತ, ಇನ್ನಿತರ ತೊಂದರೆಗಳಿರುವ ಹಿರಿಯ ನಾಗರಿಕರು ಕೂಡ ಶಿಬಿರದ ಸೌಲಭ್ಯ ಪಡೆಯಲು ಅನುಕೂಲ ಕಲ್ಪಿಸಬೇಕು. ಶಿಬಿರದ ಸಂದರ್ಭದಲ್ಲಿ ಯುಡಿಐಡಿ ಕಾರ್ಡ್ ವಿತರಣೆ, ವಿಕಲಚೇತನರ ಪಿಂಚಣಿ, ಇನ್ನಿತರ ಸೌಲಭ್ಯಗಳನ್ನು ಒದಗಿಸಲು ಏರ್ಪಾಡು ಮಾಡಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ‘ಸಮ್ಮಿಲನ-2025’ ರ ಸಂವಾದ

ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶೃತಿ, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಉಪನಿರ್ದೇಶಕ ಸುರೇಶ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮೀನಾಕ್ಷಿ, ಅಲಿಮ್ಕೊ ಸಂಸ್ಥೆಯ ಶಿಲ್ಪಾ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಎಂ. ವಿ. ಸುಧಾ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X