ಮದ್ದೂರು ಘಟನೆ ಬಗ್ಗೆ ಕ್ರಮ ಕೈಗೊಂಡರೂ ಬಿಜೆಪಿ ಸಭೆ ನಡೆಸುವುದರಲ್ಲಿ ಅರ್ಥವಿದೆಯೇ: ಎನ್ ಚಲುವರಾಯಸ್ವಾಮಿ

Date:

Advertisements

ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ವಿಸರ್ಜನೆ ವೇಳೆ ನಡೆದ ಗಲಾಟೆ ಮುಸ್ಲಿಮರ ಕಡೆಯಿಂದಲೇ ಪೂರ್ಣ ಪ್ರಮಾಣದಲ್ಲಿ ಆಗಿದೆ. ಆದ್ದರಿಂದ ಹಿಂದೂಗಳನ್ನು ಬಂಧಿಸಿಲ್ಲ, ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ. 21 ಮಂದಿ ತಪ್ಪಿತಸ್ಥರನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಕ್ರಮ ಕೈಗೊಂಡರೂ ಬಿಜೆಪಿಯವರು ಸಭೆ ನಡೆಸಿದರೆ ಅರ್ಥವಿದೆಯೇ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಪ್ರಶ್ನಿಸಿದರು.

ಚಿಕ್ಕಮಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆಯೆಂದು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿರುವ ರಾಜ್ಯ ಬಿಜೆಪಿ ಮುಖಂಡರಿಗೆ ನಾಚಿಕೆಯಾಗಬೇಕು. ಕಾಂಗ್ರೆಸ್ ಅಧಿಕಾರದಲ್ಲೇ ಗಲಭೆಯಾಗುತ್ತದೆ ಎಂಬುದು ಸುಳ್ಳು. ಬಿಜೆಪಿಯವರ ಆಡಳಿತದಲ್ಲಿ ಈ ರೀತಿ ಘಟನೆಗಳು ನಡೆದಿಲ್ಲವೇ? ಒಮ್ಮೆ ಹಿಂದೆ ತಿರುಗಿ ನೋಡಲಿ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಸಿ ಟಿ ರವಿ ವಿರುದ್ಧ ಸುವೋ ಮೋಟೋ ಪ್ರಕರಣ ದಾಖಲು

“ಭದ್ರತಾ ವೈಫಲ್ಯವಾಗಿರುವ ಅನುಮಾನ ಇದೆ. ಈ ಗಲಯ ಹಿಂದೆ ಯಾರಿದ್ದಾರೆ ಎಂಬುದರ ಕುರಿತೂ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದರು.

“ನನಗಿರುವ ಮಾಹಿತಿ ಪ್ರಕಾರ ಸಾಮೂಹಿಕ ಗಣಪತಿ ಮೆರವಣಿಗೆಗೆ ನಾಲ್ಕೈದು ಗಣಪತಿಗಳು ಮಾತ್ರ ಇದ್ದವು. ಬಿಜೆಪಿ–ಜೆಡಿಎಸ್‌ನವರು ಬೆಂಗಳೂರಿನಿಂದ ಖರೀದಿ ಮಾಡಿ ತಂದು ಗಣಪತಿಗಳ ಸಂಖ್ಯೆಯನ್ನು ಜಾಸ್ತಿ ಮಾಡಿಕೊಳ್ಳುವ ಪ್ರಯತ್ನವನ್ನು ಮಾಡಿದರು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X