ರಾಯಚೂರು | ನಕಲಿ ದಾಖಲೆ ಸೃಷ್ಟಿಸಿ ಉದ್ಯಾನ ವನ ಜಾಗ ಮಾರಾಟ : ಪುರಸಭೆ ಮುಖ್ಯಾಧಿಕಾರಿ ಸೇರಿ 3 ಅಮಾನತು

Date:

Advertisements

ಲಿಂಗಸೂಗೂರು ಪುರಸಭೆ ವ್ಯಾಪ್ತಿಯ ಹುಲಿಗುಡ್ಡ ಸೀಮಾದ ವಾರ್ಡ್ 8ರಲ್ಲಿರುವ ಲೇಔಟ್‌ನ ಉದ್ಯಾನ ವನದ ಜಾಗವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನಗಳನ್ನಾಗಿ ಪರಿವರ್ತಿಸಿ ಮಾರಾಟ ಮಾಡಲು ಯತ್ನಿಸಿದ ಹಿನ್ನಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ, ಕಂದಾಯ ಅಧಿಕಾರಿ ಹಾಗೂ ಕಂದಾಯ ನಿರೀಕ್ಷಕರನ್ನು ಜಿಲ್ಲಾಧಿಕಾರಿಗಳು ಅಮಾನತು ಮಾಡಿ ಆದೇಶಿಸಿದ್ದಾರೆ.

ಪುರಸಭೆ ವ್ಯಾಪ್ತಿಯಲ್ಲಿ ಬರುವ ಹುಲಿಗುಡ್ಡ ಸೀಮಾದ 10/1/1, 10/2/1, 10/1/13 209-32 ಎಕರೆ ಜಮೀನಿನ ಅನುಮೋದಿತ ವಿನ್ಯಾಸದಲ್ಲಿ ಉದ್ಯಾನವನ ಮತ್ತು ಬಯಲು ಜಾಗಗಾಗಿ ಕಾಯ್ದಿರಿಸಿದ ಸ್ಥಳದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 9 ಅನಧಿಕೃತ ನಿವೇಶನಗಳನ್ನು ಸೃಜಿಸಿ ಹಾಗೂ ಸದರಿ ನಿವೇಶನಗಳಿಗೆ ನಮೂನೆ -3 (ನಕಲು ಖಾತಾ) ನೀಡಲು ಶಿಫಾರಸ್ಸು ಮಾಡಿರುವುದು ಸಾಬೀತಾಗಿದೆ.

ಕರ್ತವ್ಯ ಲೋಪ ಮತ್ತು ಅಧಿಕಾರ ದುರುಪಯೋಗ ಕಂಡು ಬಂದಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಾಧಿಕಾರಿ ರವಿ ಸಿರಗುಪ್ಪಿ ಮತ್ತು ಕಂದಾಯ ಅಧಿಕಾರಿ ಅಶೋಕ ಹಾಗೂ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಖಯಾಜ್ ಅವರನ್ನು ಅಮಾನತು ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು |11 ಖಾಸಗಿ ಆಸ್ಪತ್ರೆಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ

ಅಮಾನತು ಅವಧಿಯಲ್ಲಿ ಸದರಿ ನೌಕರರು ಕರ್ನಾಟಕ ಸೇವಾ ನಿಯಮಗಳು ನಿಯಮ 98 ರಂತೆ ನಿಯಮಾನುಸಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಜಿಲ್ಲಾಧಿಕಾರಿ ಕೆ.ನಿತೀನ್ ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X