ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 | ರೈತರಿಗೆ ನ್ಯಾಯಯುತ ಪರಿಹಾರ, ಸಂಪುಟ ಸಭೆಯಲ್ಲಿ ತೀರ್ಮಾನ: ಸಿದ್ದರಾಮಯ್ಯ

Date:

Advertisements

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ ಜಮೀನು ಕಳೆದುಕೊಳ್ಳುವ ರೈತರಿಗೆ ನ್ಯಾಯಯುತವಾದ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ಸಂತ್ರಸ್ತರಿಗೆ ಸೂಕ್ತ ಪುನರ್ವಸತಿಯನ್ನು ಸಹ ಕಲ್ಪಿಸಲಾಗುವುದು. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧ ಸಭಾಂಗಣದಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

“ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರಲ್ಲಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟ 519 ಮೀಟರ್ ನಿಂದ 524 ಮೀಟರ್‌ಗೆ ಎತ್ತರಿಸುವುದರಿಂದ ಹೆಚ್ಚುವರಿಯಾಗಿ 100 ಟಿ ಎಂ ಸಿ. ನೀರಿನ ಪ್ರಮಾಣ ಸಂಗ್ರಹ ಅಂದಾಜಿಸಲಾಗಿದೆ” ಎಂದು ಹೇಳಿದರು.

“ಯೋಜನೆ ಅನುಷ್ಠಾನಕ್ಕೆ ಒಟ್ಟು 1,33,867 ಎಕ್ರೆ ಜಮೀನು ಭೂಸ್ವಾಧೀನ ಅಗತ್ಯವಿದ್ದು, ಇದರಲ್ಲಿ 75,563 ಎಕ್ರೆ ಹಿನ್ನೀರಿನಲ್ಲಿ ಮುಳುಗಡೆಯಾಗುವ ಜಮೀನು ಸೇರಿದೆ. ಈವರೆಗೆ 29,566 ಎಕರೆ ಭೂಸ್ವಾಧೀನ ಐತೀರ್ಪು ಹೊರಡಿಸಲಾಗಿದೆ. 59,354 ಎಕರೆ ಜಮೀನು ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕಿದೆ. ಮುಳುಗಡೆ ಹೊಂದಲಿರುವ ಜಮೀನನ್ನು 2ಹಂತದಲ್ಲಿ ಭೂಸ್ವಾಧೀನಕ್ಕೆ ಒಳಪಡಿಸುವ ಬದಲು ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಲು ಈಗಾಗಲೇ ತೀರ್ಮಾನಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ, ದಸರಾ, ಗಣೇಶ ಮತ್ತು ಅಶೋಕ್ ಮೋಚಿ

“ಯೋಜನೆ ಅನುಷ್ಠಾನಕ್ಕೆ ಆರಂಭದಲ್ಲಿ 51,148 ಕೋಟಿ ರೂ. ಯೋಜನಾ ಮೊತ್ತ ಅಂದಾಜಿಸಲಾಗಿತ್ತು. ಈಗ ಪರಿಷ್ಕೃತ 87,818 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದರಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ 17,627 ಕೋಟಿ ರೂ. ಆರಂಭದಲ್ಲಿ ಅಂದಾಜಿಸಲಾಗಿತ್ತು. ಪ್ರಸ್ತುತ ಪರಿಷ್ಕೃತ ಮೊತ್ತ 40,557.09 ಕೋಟಿ ರೂ. ಅಂದಾಜಿಸಲಾಗಿದೆ. ಯೋಜನೆಗೆ ಸಂಬಂಧಿಸಿದಂತೆ 9 ಉಪ ಯೋಜನಾ ಸಿವಿಲ್ ಕಾಮಗಾರಿಗಳಿಗೆ ಪರಿಷ್ಕೃತ ಅಂದಾಜು ಮೊತ್ತ 25,122.53 ಕೋಟಿ ರೂಪಾಯಿ ಅಂದಾಜಿಸಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ನಮ್ಮ ಸರ್ಕಾರದ ವಾಗ್ದಾನವಾಗಿದೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

Download Eedina App Android / iOS

X