ಬಿ ಸರೋಜಾದೇವಿ, ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ

Date:

Advertisements

ನಟಿ ಬಿ ಸರೋಜಾದೇವಿ ಹಾಗೂ ನಟ ಡಾ ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ವಿಷ್ಣುವರ್ಧನ್ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಅದೇ ರೀತಿ ಬಿ. ಸರೋಜಾದೇವಿ ಕೂಡ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದರು. ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ನೀಡಬೇಕು ಎಂದು ಎರಡು ಕುಟುಂಬಗಳು ಹಾಗೂ ಅಭಿಮಾನಿಗಳು ಮನವಿ ಮಾಡಿದ್ದರು.

ಇದನ್ನು ಓದಿದ್ದೀರಾ? ’12th Fail’ ಸೋಲುಸೋಲುತ್ತಾ ಗೆಲ್ಲುತ್ತಾ ಹೋದವನ ಜೀವನಗಾಥೆ

ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು | ನಟ ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತ: 10 ಮಂದಿ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕೀಯ ಪಕ್ಷದ ನಾಯಕ ವಿಜಯ್ ಅವರ ತಮಿಳಗ ವೆಟ್ಟ್ರಿ...

BREAKING NEWS | ಲಡಾಖ್ ಹಿಂಸಾಚಾರ: ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನ

ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ಸೇರಿದಂತೆ ಪ್ರಮುಖ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟು ನಡೆದ...

‘ಬಾ**ರ್ಡ್ಸ್‌ ಆಫ್‌ ಬಾಲಿವುಡ್’ ವಿವಾದ: ಮಾನನಷ್ಟ ಮೊಕದ್ದಮೆಯಲ್ಲಿ ಆರ್ಯನ್ ಖಾನ್ ಮತ್ತು ಸಮೀರ್ ವಾಂಖೆಡೆ ಫೈಟ್

‌ಇತ್ತೀಚೆಗಷ್ಟೇ ಬಿಡುಗಡೆಯಾದ ಆರ್ಯನ್‌ ಖಾನ್‌ ನಿರ್ದೇಶನದ 'ದಿ ಬಾ**ರ್ಡ್ಸ್‌ ಆಫ್‌ ಬಾಲಿವುಡ್‌'...

ಮಹಿಳೆಗೆ ಹಲ್ಲೆ | ಸೀರೆ ಅಂಗಡಿ ಮಾಲೀಕ & ಸಹಾಯಕ ಬಂಧನ

ಮಹಿಳೆಗೆ ಹಲ್ಲೆ ಮಾಡಿದ್ದ ಸೀರೆ ಅಂಗಡಿಯ ಮಾಲೀಕ ಮತ್ತು ಆತನ ಸಹಾಯಕನನ್ನು...

Download Eedina App Android / iOS

X