ಶಿವಮೊಗ್ಗ | ಸೆ. 12,13 : ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

Date:

Advertisements

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ. 12 ಮತ್ತು 13 ರಂದು ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ಜುಡೋ, ಯೋಗ, ಬ್ಯಾಡ್ಮಿಂಟನ್, ಈಜು, ಟೆನ್ನಿಸ್ ಮತ್ತು ಹಾಕಿ ದಸರಾ ಕ್ರೀಡಾಕೂಟ ಆಯೋಜಿಸಲಾಗಿದ್ದು, ಸೆ. 12 ರಂದು ಬೆಳಗ್ಗೆ 10.00ಕ್ಕೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆ ಸಮಾರಂಭ ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಎಸ್.ಎನ್. ಚನ್ನಬಸಪ್ಪ ವಹಿಸಲಿದ್ದಾರೆ.

ಭದ್ರಾವತಿ ಕ್ಷೇತ್ರದ ಶಾಸಕರು ಮತ್ತು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ ಹಾಗೂ ಸಾಗರ ಕ್ಷೇತ್ರದ ಶಾಸಕರು ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಇವರುಗಳು ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ಅಭಿವೃದ್ಧಿ ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಮತ್ತು ಪ್ರಧಾನ ಕಾರ್ಯದರ್ಶಿಗಳು ವಿಶೇಷ ಆಹ್ವಾನಿತರು. ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಪೊಲೀಸ್ ಅಧೀಕ್ಷಕರು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಉಪಸ್ಥಿತರಿರಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

Download Eedina App Android / iOS

X